

ವಿಜಯವಾಣಿ ಸುದ್ದಿಜಾಲ ಧಾರವಾಡ
ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಆಗಬಾರದು. ಅಧಿಕಾರಿಗಳು ಸಮಸ್ಯೆಗಳಿರುವ ಹಳ್ಳಿಗಳಿಗೆ ತೆರಳಿ ಪರಿಹಾರ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು.
ನಗರದ ಜಿಲ್ಲಾಽಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಅಳ್ನಾವರ, ಧಾರವಾಡ, ಹುಬ್ಬಳ್ಳಿ, ಕುಂದಗೋಳ, ಕಲಘಟಗಿ ತಾಲೂಕಿನ ಹಳ್ಳಿಗಳಲ್ಲಿ ಕುಡಿಯುವ ನೀರಿನ ಅಭಾವವಾಗುವ ಸಂಭವವಿದೆ. ಅಽಕಾರಿಗಳು ಆಯಾ ಶಾಸಕರ ಜತೆ ಏ. 20ರೊಳಗೆ ನೀರಿನ ಸಮಸ್ಯೆ ಕುರಿತು ಸಭೆ ನಡೆಸಬೇಕು. ಪಾಲಿಕೆ ವ್ಯಾಪ್ತಿಯ 29 ವಾರ್ಡ್ಗಳಲ್ಲಿ ನೀರಿನ ಸಮಸ್ಯೆಯಾಗುತ್ತಿದೆ. ಸಮಿತಿ ರಚಿಸಿ ಮಾಹಿತಿ ಸಂಗ್ರಹಿಸಬೇಕು. 3 ದಿನಗಳಲ್ಲಿ ವರದಿ ಸಲ್ಲಿಸಬೇಕು ಎಂದು ಪಾಲಿಕೆ ಆಯುಕ್ತರಿಗೆ ಸೂಚಿಸಿದರು.
ಶಾಸಕ ಎನ್.ಎಚ್. ಕೋನರಡ್ಡಿ ಮಾತನಾಡಿ, ಕುಡಿಯುವ ನೀರಿನ ಸಮಸ್ಯೆಯನ್ನು ನಿರ್ಲಕ್ಷಿಸಬಾರದು. ಜಲಜೀವನ ಮಿಷನ್ ಯೋಜನೆಯ ಕಾಮಗಾರಿಗಳಲ್ಲಿ ನೀರು ಪೂರೈಕೆಯಾಗುತ್ತಿಲ್ಲ ಎಂಬ ದೂರುಗಳಿವೆ. ಅವುಗಳಿಗೆ ಸ್ಪಂದಿಸಿ ಕುಡಿಯುವ ನೀರು ಒದಗಿಸಬೇಕು ಎಂದರು.
ಜಿಲ್ಲಾಧಿಕಾರಿ ದಿವ್ಯ ಪ್ರಭು ಮಾತನಾಡಿ, ಜಿಲ್ಲೆಯ ಸುಮಾರು 90 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಬಹುದು ಎಂದು ಅಂದಾಜಿಸಲಾಗಿದೆ. ಈಗಾಗಲೇ 160 ಕಡೆಗಳಲ್ಲಿ ಬೋರ್‌ವೆಲ್ ಕೊರೆಸಲು ಸ್ಥಳ ಗುರುತಿಸಲಾಗಿದೆ ಎಂದರು.
ಪೊಲೀಸ್ ಆಯುಕ್ತ ಎನ್. ಶಶಿಕುಮಾರ, ಜಿಲ್ಲಾ ಪಂಚಾಯಿತಿ ಸಿಇಒ ಭುವನೇಶ ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಠಾಽಕಾರಿ ಡಾ. ಗೋಪಾಲ ಬ್ಯಾಕೋಡ, ಪಾಲಿಕೆ ಆಯುಕ್ತರಾದ ರುದ್ರೇಶ ಘಾಳಿ, ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ವೇದಿಕೆಯಲ್ಲಿದ್ದರು.
ಜಿಲ್ಲಾ ಮಟ್ಟದ ಅಽಕಾರಿಗಳು, ತಹಸೀಲ್ದಾರರು, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಽಕಾರಿಗಳಿದ್ದರು.