ಹಳ್ಳಿಗಳಿಗೆ ಸೌಕರ್ಯ ಒದಗಿಸಲು ಪ್ರಯತ್ನ

PH 03
Published on

ಕಮಲಾಪುರ: ಎರಡನೇ ಬಾರಿಗೂ ಅತ್ಯಧಿಕ ಮತಗಳನ್ನು ನೀಡಿ ನನ್ನನ್ನು ಗೆಲ್ಲಿಸಿದ್ದಕ್ಕಾಗಿ ನಿಮಗೆಲ್ಲರಿಗೂ ನಾನು ಚಿರಋಣಿ. ನಿಮ್ಮ ನೋವು- ನಲಿವುಗಳಿಗೆ ಸದಾ ಸ್ಪಂದಿಸುವೆ. ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಶ್ರಮಿಸುವೆ ಎಂದು ಶಾಸಕ ಬಸವರಾಜ ಮತ್ತಿಮಡು ಹೇಳಿದರು.

ಮರಗುತ್ತಿ ಗ್ರಾಮದಲ್ಲಿ ಶುಕ್ರವಾರ ಸಮಸ್ತ ಗ್ರಾಮಸ್ಥರಿಂದ ಹಮ್ಮಿಕೊಂಡಿದ್ದ ಸನ್ಮಾನ ಸಮಾರಂಭದಲ್ಲಿ ಸತ್ಕಾರ ಸ್ವೀಕರಿಸಿ ಮಾತನಾಡಿ, ಕಳೆದ ಅವಧಿಯಲ್ಲಿ ಸುಮಾರು 1,600 ಕೋಟಿ ರೂ. ಅನುದಾನ ತಂದು ಸಾಕಷ್ಟು ಕೆಲಸಗಳನ್ನು ಮಾಡಿದ್ದೇನೆ. ಇದೀಗ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದು, ಇಲ್ಲಿವರೆಗೂ ಕ್ಷೇತ್ರಕ್ಕೆ ಅನುದಾನ ಬಂದಿಲ್ಲ. ಕೆಕೆಆರ್‌ಡಿಬಿ ಹಾಗೂ ಶಾಸಕರ ಅನುದಾನದಲ್ಲಿ ಹಳ್ಳಿಗಳಿಗೆ ಸೌಕರ್ಯ ಒದಗಿಸಲು ಪ್ರಯತ್ನಿಸುವೆ ಎಂದರು.

ಜಿಪಂ ಮಾಜಿ ಅಧ್ಯಕ್ಷ ಶಿವಪ್ರಭು ಪಾಟೀಲ್, ಗ್ರಾಪಂ ಅಧ್ಯಕ್ಷ ಚಂದ್ರಕಾಂತ ಜಾಧವ್, ಪ್ರಮುಖರಾದ ಸಂಗಮೇಶ ವಾಲಿ, ಶಿವಶೆಟ್ಟಿ ಪಾಟೀಲ್, ಉದಯಕುಮಾರ ರಟಕಲ್, ಶಿವಕುಮಾರ ದೊಶೆಟ್ಟಿ, ಶಿವಶರನಪ್ಪ ಪಾಟೀಲ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net