ಹಸಿದ ಹೊಟ್ಟೆ ತುಂಬಿಸಲಿದೆ ಇಂದಿರಾ ಕ್ಯಾಂಟೀನ್

Indira Canteen will fill hungry stomachs
Indira Canteen will fill hungry stomachs
Published on

ಇಳಕಲ್ಲ (ಗ್ರಾ) : ಬಡವರ, ಮಧ್ಯಮ ವರ್ಗದವರ ಹಸಿದ ಹೊಟ್ಟೆಯನ್ನು ಇಂದಿರಾ ಕ್ಯಾಂಟೀನ್ ತುಂಬಿಸಲಿದೆ ಎಂದು ಶಾಸಕ ವಿಜಯಾನಂದ ಕಾಶಪ್ಪನವರ ಹೇಳಿದರು.

ಇಲ್ಲಿನ ಬಸ್ ನಿಲ್ದಾಣದ ಎದುರಗಿನ ಪೊಲೀಸ್ ಠಾಣೆ ಆವರಣದಲ್ಲಿ ಆರಂಭಿಸಲಾದ ಇಂದಿರಾ ಕ್ಯಾಂಟೀನನ್ನು ಮಂಗಳವಾರ ಉದ್ಘಾಟಿಸಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಕಾಳಜಿಪೂರ್ವಕವಾಗಿ ರಾಜ್ಯಾದ್ಯಂತ ಇಂದಿರಾ ಕ್ಯಾಂಟೀನ್ ಆರಂಭಿಸಿ, ಹಸಿದ ಹೊಟ್ಟೆಗಳನ್ನು ತುಂಬಿಸುತ್ತಿದ್ದಾರೆ ಎಂದರು.

ನಗರಸಭೆ ಅಧ್ಯಕ್ಷೆ ಸುಧಾರಾಣಿ ಸಂಗಮ ಮಾತನಾಡಿದರು.

ಇಳಕಲ್ ಶ್ರೀಮಠದ ಗುರುಮಹಾಂತ ಶ್ರೀಗಳು, ಶಿರೂರ ನಿಸರ್ಗ ಕೇಂದ್ರದ ಸಂಚಾಲಕ ಡಾ. ಬಸವಲಿಂಗ ಸ್ವಾಮಿಗಳು, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ವೆಂಕಟೇಶ ಸಾಕಾ, ಬಾಬಾಸಾಹೇಬ ಅಂಬೇಡ್ಕರ್ ಹಿತರಕ್ಷಣಾ ಸಮಿತಿ ಅಧ್ಯಕ್ಷ ಶರಣಪ್ಪ ಆಮದಿಹಾಳ, ಅರುಣ ಬಿಜ್ಜಳ, ಎಸ್.ಜಿ. ರಾಮಗಿರಿಮಠ, ವಿಠ್ಠಲ ಜಕ್ಕಾ, ಶಬ್ಬೀರ ಬಾಗವಾನ, ಪೌರಾಯುಕ್ತ ಶ್ರೀನಿವಾಸ ಜಾಧವ, ಉಪಾಧ್ಯಕ್ಷೆ ಕಾಳಮ್ಮ ಜಕ್ಕಾ ಇದ್ದರು. ನಂತರ ಶಾಸಕರು ಕೆಲವು ಪ್ರಮುಖರೊಂದಿಗೆ ಇಂದಿರಾ ಕ್ಯಾಂಟೀನ್ ಲಹಾರವನ್ನು ದುಡ್ಡು ಕೊಟ್ಟು ಸ್ವೀಕರಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net