ಹಸು ಮೇಲೆ ಹುಲಿ ದಾಳಿ

17 months old Bengal tiger cub (male) resting in open area
Bandhavgarh National Park, India; 17 months old Bengal tiger cub (male) resting in open area early morning, dry season
Published on


ಕೊಡಗು :ಸಿದ್ದಾಪುರದ ಮಾಲ್ದಾರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾರ್ಗೋಳಿ ಹುಂಡಿಯಲ್ಲಿ ಹಾಡಹಗಲೇ ಹುಲಿ ದಾಳಿ ನಡೆಸಿ, ಹಸುವನ್ನು ಕೊಂದು ಹಾಕಿದೆ. ಮೈಲದಪುರದ ಪ್ರೇಮಾ ಅವರು ಭಾನುವಾರ ಮಧ್ಯಾಹ್ನ ಹಸುವನ್ನು ಮೇಯಲು ಬಿಟ್ಟಿದ್ದರು. ಈ ವೇಳೆ ಹುಲಿ ದಾಳಿ ಮಾಡಿದೆ. ಇದನ್ನು ಕಂಡು ಸ್ಥಳೀಯರು ಭಯಭೀತರಾಗಿದ್ದಾರೆ.
ಸ್ಥಳಕ್ಕೆ ವಿರಾಜಪೇಟೆ ಶಾಸಕ ಕೆ.ಜಿ. ಬೋಪಯ್ಯ ಭೇಟಿ ನೀಡಿದ್ದರು. ಗ್ರಾಮಸ್ಥರು ಹುಲಿ ಸೆರೆಹಿಡಿಯಲು ಅರಣ್ಯ ಇಲಾಖೆಯನ್ನು ಒತ್ತಾಯಿಸಿದ್ದಾರೆ. ಇಲ್ಲದಿದ್ದರೆ ಅರಣ್ಯ ಭವನಕ್ಕೆ ಮುತ್ತಿಗೆ ಹಾಕುವುದಾಗಿ ಎಚ್ಚರಿಕೆ ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net