ಹಸುವಿನ ಮೇಲೆ ಕಾಡು ಪ್ರಾಣಿ ದಾಳಿ

ಹಸುವಿನ ಮೇಲೆ ಕಾಡು ಪ್ರಾಣಿ ದಾಳಿ
Published on

ಗುಂಡ್ಲುಪೇಟೆ: ಜಮೀನಿನಲ್ಲಿ ಮೇಯುತ್ತಿದ್ದ ಹಸುವಿನ ಮೇಲೆ ಕಾಡು ಪ್ರಾಣಿ ದಾಳಿ ನಡೆಸಿ ಕೊಂದುಹಾಕಿರುವ ಘಟನೆ ತಾಲೂಕಿನ ಕುರುಬರಹುಂಡಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

ಗ್ರಾಮದ ನಾಗಪ್ಪ ಎಂಬುವರ ಜಮೀನಿನಲ್ಲಿ ಹಸು ಮೇಯುತ್ತಿದ್ದಾಗ ಹುಲಿ ಏಕಾಏಕಿ ದಾಳಿ ನಡೆಸಿದೆ. ಘಟನೆಯಲ್ಲಿ ಹಸು ಸ್ಥಳದಲ್ಲಿಯೇ ಸಾವಿಗೀಡಾಗಿದ್ದು, ಸ್ಥಳಕ್ಕೆ ಓಂಕಾರ್ ವಲಯದ ಅರಣ್ಯ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದರು. ಜಾನುವಾರು ನಷ್ಟಕ್ಕೆ ಕೂಡಲೇ ಪರಿಹಾರ ಕೊಡಿಸುವ ಭರವಸೆ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net