ಹಾಕಿ ಮಾಂತ್ರಿಕ ಮೇಜರ್ ಧ್ಯಾನ್‌ಚಂದ್ ಸ್ಮರಣೆ

29SPT04
Published on

ಸೋಮವಾರಪೇಟೆ: ಬ್ಲೂಸ್ಟಾರ್ ಹಾಕಿ ಸಂಸ್ಥೆ ವತಿಯಿಂದ ಅಂತಾರಾಷ್ಟ್ರೀಯ ಕ್ರೀಡಾ ದಿನ ಹಾಗೂ ಹಾಕಿ ಮಾಂತ್ರಿಕ ಮೇಜರ್ ಧ್ಯಾನ್‌ಚಂದ್ ಅವರ ಜನ್ಮದಿನವನ್ನು ಜೂನಿಯರ್ ಕಾಲೇಜಿನ ಆಟದ ಮೈದಾನದಲ್ಲಿ ಮಂಗಳವಾರ ಆಚರಿಸಲಾಯಿತು.


ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಬೆಳ್ಳಿಯಪ್ಪ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ದೇಶದ ಅಪ್ರತಿಮ ಕ್ರೀಡಾ ಸಾಧಕ ಮೇಜರ್ ಧ್ಯಾನ್‌ಚಂದ್ ಕ್ರೀಡಾಪಟುಗಳಿಗೆ ಸ್ಫೂರ್ತಿಯಾಗಿದ್ದಾರೆ. ಅವರು 1928ರಲ್ಲಿ ಭಾರತ ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಪಡೆಯಲು ಪ್ರಮುಖ ಕಾರಣಕರ್ತರಾಗಿದ್ದರು.

17ನೇ ವಯಸ್ಸಿನಲ್ಲಿಯೇ ಕ್ರೀಡಾಕ್ಷೇತ್ರಕ್ಕೆ ಬಂದು 1949ರವರೆಗೆ 189 ಪಂದ್ಯಗಳನ್ನಾಡಿದ ಕೀರ್ತಿ ಅವರಿಗೆ ಸಲ್ಲುತ್ತದೆ ಎಂದರು.


ಕ್ರೀಡೆಯಲ್ಲಿ ವಿದ್ಯಾರ್ಥಿಗಳು ತೊಡಗಿಸಿಕೊಳ್ಳಬೇಕಿದೆ. ಇದು ಮಾನಸಿಕ ಹಾಗೂ ದೈಹಿಕ ಬೆಳವಣಿಗೆಗೆ ಸಹಕಾರಿಯಾಗಿದೆ. ಧ್ಯಾನ್‌ಚಂದ್ ಅವರ ಆದರ್ಶಗಳನ್ನು ಮೈಗೂಡಿಸಿಕೊಂಡು ಉತ್ತಮ ಕ್ರೀಡಾಪಟುಗಳಾಗಿ ಹೊರ ಹೊಮ್ಮುಬೇಕು ಎಂದು ಕಿವಿಮಾತು ಹೇಳಿದರು.


ಬ್ಲೂಸ್ಟಾರ್ ಹಾಕಿ ಸಂಸ್ಥೆಯ ಸ್ಥಾಪಕ ಸದಸ್ಯ ಬಿ.ಎಂ. ಸುರೇಶ್, ಕ್ಲಬ್‌ನ ಹಿರಿಯ ಸದಸ್ಯರಾದ ಎಸ್.ಬಿ.ಯಶ್ವಂತ್, ಶುಭಾಕರ್, ಬಿ.ಈ.ಅರುಣ್‌ಕುಮಾರ್, ಅಭಿ ಗೋವಿಂದಪ್ಪ, ಪ್ರದೀಪ್, ಮಾಜಿ ಸೈನಿಕ ಚಂದ್ರಕುಮಾರ್, ಹಾಕಿ ತರಬೇತುದಾರ ಯುವರಂಜನ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net