

ಹಾನಗಲ್ಲ: ವಾಜಪೇಯಿನಗರ ವಸತಿ ಯೋಜನೆಯಡಿ ಸ್ಥಳೀಯ ಪುರಸಭೆ ವ್ಯಾಪ್ತಿಯ 88 ಫಲಾನುಭವಿಗಳಿಗೆ ಶಾಸಕ ಶ್ರೀನಿವಾಸ ಮಾನೆ ಅವರು ಮನೆ ನಿರ್ಮಾಣ ಮಂಜೂರಾತಿ ಆದೇಶ ಪತ್ರ ವಿತರಿಸಿದರು.
ಬಳಿಕ ಮಾತನಾಡಿದ ಅವರು, ಹಾನಗಲ್ಲ ಪಟ್ಟಣಕ್ಕೆ ಇತಿಹಾಸದಲ್ಲಿ ಮೊದಲ ಬಾರಿಗೆ ವಾಜಪೇಯಿ ನಗರ ವಸತಿ ಯೋಜನೆಯಡಿ ಒಂದು ಸಾವಿರ ಹಾಗೂ ಕೊಳಚೆ ನಿರ್ಮೂಲನಾ ಅಭಿವೃದ್ಧಿ ಮಂಡಳಿಯಿಂದ ಒಂದು ಸಾವಿರ ಸೇರಿ ಒಟ್ಟು 2 ಸಾವಿರ ಮನೆಗಳು ಮಂಜೂರಾಗಿವೆ. ವಾಜಪೇಯಿ ನಗರ ವಸತಿ ಯೋಜನೆಯಡಿ 245 ಫಲಾನುಭವಿಗಳಿಗೆ ಮನೆ ನಿರ್ಮಾಣ ಮಂಜೂರಾತಿ ಆದೇಶ ಪತ್ರ ವಿತರಿಸಲಾಗುತ್ತಿದೆ. ಇನ್ನುಳಿದ ಫಲಾನುಭವಿಗಳಿಗೂ ಶೀಘ್ರದಲ್ಲಿ ಆದೇಶ ಪತ್ರ ವಿತರಿಸಲಾಗುವುದು. ಅರ್ಹ ಫಲಾನುಭವಿಗಳನ್ನು ಗುರುತಿಸಿ ಎರಡೂ ಯೋಜನೆಗಳಡಿ ಮನೆ ನಿರ್ಮಾಣಕ್ಕೆ ಅವಕಾಶ ನೀಡಲಾಗುತ್ತಿದೆ ಎಂದರು.
ತಹಸೀಲ್ದಾರ್ ರವಿಕುಮಾರ ಕೊರವರ, ಪುರಸಭೆ ಮಾಜಿ ಅಧ್ಯಕ್ಷ ಯಲ್ಲಪ್ಪ ಕಿತ್ತೂರ, ಅನಂತವಿಕಾಸ ನಿಂಗೋಜಿ, ಖುರ್ಷಿದ್‌ಅಹ್ಮದ್ ಹುಲ್ಲತ್ತಿ, ಮಾಜಿ ಉಪಾಧ್ಯಕ್ಷ ಮಹೇಶ ಪವಾಡಿ, ಶಂಶಿಯಾ ಬಾಳೂರ, ಸದಸ್ಯ ಪರಶುರಾಮ ಖಂಡೂನವರ, ಮಮತಾ ಆರೆಗೊಪ್ಪ, ಹಸೀನಾಬಿ ನಾಯ್ಕನವರ, ವಸತಿ ನಿಗಮದ ಅಧಿಕಾರಿ ಪ್ರಸಾದಗೌಡ, ಮುಖ್ಯಾಧಿಕಾರಿ ವೈ.ಕೆ. ಜಗದೀಶ ಇದ್ದರು.