ಹಾಪ್‌ಕಾಮ್ಸ್ ಅಧಿಕಾರದ ಚುಕ್ಕಾಣಿ ಹಿಡಿದ ಬಿಜೆಪಿ

29 charan 1
Published on

ಚಾಮರಾಜನಗರ: ಚಾಮರಾಜನಗರ ಜಿಲ್ಲಾ ತೋಟದ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಹಕಾರ ಸಂಘದ ಅಧಿಕಾರ ಗದ್ದುಗೆ ಬಿಜೆಪಿ ಪಾಲಾಗಿದೆ.

ನಗರದ ಸಂತೇಮರಹಳ್ಳಿ ರಸ್ತೆಯಲ್ಲಿರುವ ಹಾಪ್‌ಕಾಮ್ಸ್ ಕಚೇರಿಯಲ್ಲಿ ಭಾನುವಾರ 2022-27ನೇ ಸಾಲಿನ ಆಡಳಿತ ಮಂಡಳಿಯ 11 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ 7ರಲ್ಲಿ ಬಿಜೆಪಿ ಬೆಂಬಲಿಗರು ಹಾಗೂ 4ರಲ್ಲಿ ಕಾಂಗ್ರೆಸ್ ಬೆಂಬಲಿಗರು ಜಯ ಗಳಿಸಿದರು. ಹೇಮಂತಕುಮಾರ್ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದರು. ಸಂಘದ ಆಡಳಿತಾಧಿಕಾರಿ ಎ.ಆರ್. ಕಿರಣ್‌ಕುಮಾರ್, ವ್ಯವಸ್ಥಾಪಕ ನಾಗೇಶ್‌ರಾವ್, ಸಿಇಒ ನವೀನ್, ಯತಿರಾಜ್ ಇದ್ದರು.

ವಿಜಯೋತ್ಸವ: ಹಾಪ್ ಕಾಮ್ಸ್ ಚುನಾವಣೆಯಲ್ಲಿ ಬಿಜೆಪಿ ಹೆಚ್ಚಿನ ಬಹುಮತ ಪಡೆದು ಅಧಿಕಾರ ಗದ್ದುಗೆ ಏರುವ ಸೂಚನೆ ಸಿಗುತ್ತಿದ್ದಂತೆ ನಗರದ ಬಿಜೆಪಿ ಕಚೇರಿಯಲ್ಲಿ ವಿಜಯೋತ್ಸವ ಆಚರಿಸಲಾಯಿತು. ಜಯ ಗಳಿಸಿದ 7 ಜನ ಬಿಜೆಪಿ ಬೆಂಬಲಿತರ ಸದಸ್ಯರಿಗೆ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಹೂವಿನ ಹಾರ, ಶಾಲು ಹಾಕಿ ಅಭಿನಂದಿಸಿದರು.

ಹಾಪ್ ಕಾಮ್ಸ್ ಚುನಾವಣೆ ಸಮಿತಿಯ ಸಂಚಾಲಕ ಮಹದೇವಸ್ವಾಮಿ, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಎಚ್.ಎಂ.ಬಸವಣ್ಣ, ಕಾಡಾ ಅಧ್ಯಕ್ಷ ಜಿ.ನಿಜಗುಣರಾಜು, ಕೇಂದ್ರ ಪರಿಹಾರ ಸಮಿತಿ ಮಾಜಿ ಅಧ್ಯಕ್ಷ ಎಂ.ರಾಮಚಂದ್ರ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಾಗಶ್ರೀ ಪ್ರತಾಪ್, ಚಾಮುಲ್ ಅಧ್ಯಕ್ಷ ವೈ.ಸಿ.ನಾಗೇಂದ್ರ, ಎಸ್ಸಿ ಮೋರ್ಚಾ ಜಿಲ್ಲಾಧ್ಯಕ್ಷ ಕಿನಕಹಳ್ಳಿ ರಾಚಯ್ಯ, ಚುಡಾ ಮಾಜಿ ಅಧ್ಯಕ್ಷರಾದ ಎಸ್.ಬಾಲಸುಬ್ರಮಣ್ಯ, ಶಾಂತಮೂರ್ತಿ, ಹಾಪ್‌ಕಾಮ್ಸ್ ಮಾಜಿ ಅಧ್ಯಕ್ಷ ಶಾಂತಮಲ್ಲಪ್ಪ, ಯುವ ಮೋರ್ಚಾ ಜಿಲ್ಲಾ ಕಾರ್ಯದರ್ಶಿ ಮರಿಯಾಲ ಮಹೇಶ್, ಗ್ರಾಮಾಂತರ ಮಂಡಲದ ಅಧ್ಯಕ್ಷ ಬಸವಣ್ಣ, ನಗರ ಮಂಡಲದ ಅಧ್ಯಕ್ಷ ರಾಜು ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net