ಹಾರಕಬಾವಿ ಗ್ರಾಪಂಗೆ ಕೋಟಿಲಿಂಗನಗೌಡ ಅಧ್ಯಕ್ಷ

21KUDLIGI2
Published on

ಕೂಡ್ಲಿಗಿ: ತಾಲೂಕಿನ ಹಾರಕಬಾವಿ ಗ್ರಾಪಂ ಅಧ್ಯಕ್ಷರಾಗಿ ಜಿ.ಕೆ.ಕೋಟಿಲಿಂಗನಗೌಡ ಸೋಮವಾರ ಅವಿರೋಧವಾಗಿ ಆಯ್ಕೆಯಾದರು.

ತಹಸೀಲ್ದಾರ್ ವಿ.ಕೆ. ನೇತ್ರಾವತಿ ನೇತೃತ್ವದಲ್ಲಿ ಚುನಾವಣೆ ಪ್ರಕ್ರಿಯೆ ನಡೆಯಿತು. 17 ಜನ ಸದಸ್ಯರು ಹಾಜರಿದ್ದರು. ಗ್ರಾಪಂ ವ್ಯಾಪ್ತಿಯ ಹಳ್ಳಿಗಳ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದು. ವಸತಿ, ಶುದ್ಧ ಕುಡಿಯುವ ನೀರು, ಚರಂಡಿಗಳ ಸ್ವಚ್ಛತೆ, ಆರೋಗ್ಯ ಸೌಲಭ್ಯ ಕಲ್ಪಿಸಲು ಆದ್ಯತೆ ನೀಡುವುದಾಗಿ ತಿಳಿಸಿದರು.

ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಗುಂಡುಮುಣುಗು ಕೆ.ತಿಪ್ಪೇಸ್ವಾಮಿ, ಎಪಿಎಂಸಿ ಅಧ್ಯಕ್ಷ ಬೋಸಣ್ಣ, ಕಾಂಗ್ರೆಸ್ ಮುಖಂಡರಾದ ಎನ್.ಟಿ.ತಮ್ಮಣ್ಣ, ಶಾಂತಕುಮಾರ್, ರಮೇಶ್ ಗೌಡ, ಪಿಡಿಒ ವೀರಣ್ಣ, ಕಂದಾಯ ನಿರೀಕ್ಷಕ ಕೊಟ್ರೇಶ್, ಗ್ರಾಮ ಆಡಳಿತಾಧಿಕಾರಿ ಶ್ರೀನಿವಾಸ್ ಕೊಂಡಿ, ಟಿ.ಮಂಜುನಾಥ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net