ಹಾರನಹಳ್ಳಿ ಕೋಡಿಮಠದಲ್ಲಿ ಲಕ್ಷ ದೀಪೋತ್ಸವ

ಹಾರನಹಳ್ಳಿ ಕೋಡಿಮಠದಲ್ಲಿ ಲಕ್ಷ ದೀಪೋತ್ಸವ
Published on

ಅರಸೀಕೆರೆ: ಸುಕ್ಷೇತ್ರ ಹಾರನಹಳ್ಳಿ ಕೋಡಿಮಠದಲ್ಲಿ ಹರಗುರು ಚರಮೂರ್ತಿಗಳ ಸಾನಿಧ್ಯದಲ್ಲಿ ಶನಿವಾರ ಸಂಜೆ ಲಕ್ಷ ದೀಪೋತ್ಸವ ವಿಜೃಂಭಣೆಯಿಂದ ನೆರವೇರಿತು.

ಜನಜಾಗೃತಿ ಸಮಾರಂಭವನ್ನು ನಟ ವಿಜಯ ರಾಘವೇಂದ್ರ ಉದ್ಘಾಟಿಸಿ ಮಾತನಾಡಿದರು. ಜ್ಞಾನದ ದೀಪ ಹಚ್ಚಿ ಅಜ್ಞಾನದ ಕತ್ತಲು ಕಳೆಯುವ ಕೆಲಸವನ್ನು ಸುಕ್ಷೇತ್ರ ಕೋಡಿಮಠದ ಜಗದ್ಗುರುಗಳು ನಿರಂತರವಾಗಿ ನಡೆಸಿಕೊಂಡು ಬರುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ.

ಹಸಿದವರಿಗೆ ಅನ್ನ,ಸಹಸ್ರಾರು ಮಕ್ಕಳಿಗೆ ವಿದ್ಯಾದಾನ ಮಾಡುತ್ತಿರುವುದು ಪ್ರಶಸಂಸನೀಯ. ಶ್ರೀಮಠದ ಸಾರ್ಥಕ ಸೇವೆ ಇತರರಿಗೆ ಮಾದರಿಯಾಗಿದ್ದು ಕೆಲ ವರ್ಷಗಳ ಬಳಿಕ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡಿರುವುದು ಸಂತಸ ನೀಡಿದೆ ಎಂದರು.ಡಾ.ಶ್ರೀಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ವಹಿಸಿದ್ದರು.

ತಿಪಟೂರು ಷಡಕ್ಷರಮಠದ ಶ್ರೀ ರುದ್ರಮುನಿ ಸ್ವಾಮೀಜಿ, ಯಳನಡು ಜಗದ್ಗುರು ಶ್ರೀ ಜ್ಞಾನಪ್ರಭು ಸಿದ್ದರಾಮದೇಶಿಕೇಂದ್ರ ಸ್ವಾಮೀಜಿ, ಕೋಡಿಮಠ ಮಹಾಸಂಸ್ಥಾನದ ಉತ್ತರಾಧಿಕಾರಿ ಶ್ರೀ ಚೇತನ್ ಮರಿದೇವರು, ಶಾಸಕ ಕೆ.ಎಂ.ಶಿವಲಿಂಗೇಗೌಡ, ರಾಜ್ಯ ರಸ್ತೆ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ ಜಿವಿಟಿ ಬಸವರಾಜು, ಸಮಾಜ ಸೇವಕ ಸಿದ್ದೇಶ್ ನಾಗೆಂಧ್ರ ಸೇರಿ ವಿವಿಧ ಮಠಗಳ ಹರಗುರುಚರಮೂರ್ತಿಗಳು, ಚುನಾಯಿತ ಜನಪ್ರತಿನಿಧಿಗಳು, ವಿವಿಧ ಸಂಘ, ಸಂಸ್ಥೆಗಳ ಮುಖಂಡರು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net