ಹಾರ್ನ್​ಬಿಲ್ ಉತ್ಸವ ಶೀಘ್ರ

06DND2
Published on

ದಾಂಡೇಲಿ: ಇಲ್ಲಿನ ವಲಯ ಅರಣ್ಯ ಇಲಾಖೆ ಕಚೇರಿಯಲ್ಲಿ ಶನಿವಾರ ಆಯೋಜಿಸಿದ್ದ ಹಾರ್ನಬಿಲ್ ಸಂರಕ್ಷಣಾ ಸಮಿತಿಯ ಸಭೆಯಲ್ಲಿ ಶೀಘ್ರ ಹಾರ್ನಬಿಲ್ ಉತ್ಸವ ಆಯೋಜಿಸುವ ಕುರಿತು ನಿರ್ಣಯ ಕೈಗೊಳ್ಳಲಾಯಿತು. ಹಳಿಯಾಳ ಉಪ ಅರಣ್ಯ ಸಂರಕ್ಷಣಾಧಿಕಾರಿ ಬಾಲಚಂದ್ರ ಎಚ್.ಸಿ. ಅಧ್ಯಕ್ಷತೆಯಲ್ಲಿ ಜರುಗಿದ ಸಭೆಯಲ್ಲಿ ಗ್ರಾಮೀಣ ಭಾಗದಲ್ಲಿ ಹಾಗೂ ನಗರ ಪ್ರದೇಶದಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗಾಗಿ ಹಾರ್ನಬಿಲ್ ಮಹತ್ವ ತಿಳಿಸುವ ಕಿರುಚಿತ್ರ ಪ್ರದರ್ಶನ, ಚಿತ್ರಕಲಾ ಸ್ಪರ್ಧೆ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಉತ್ಸವದ ಅಂಗವಾಗಿ ಆಯೋಜಿಸಲು ಅಧಿಕಾರಿಗಳು ಒಪ್ಪಿಗೆ ಸೂಚಿಸಿದರು. ಸಭೆಯಲ್ಲಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಎಸ್.ಎಸ್ ನಿಂಗಾನಿ, ವಲಯ ಸಂರಕ್ಷಣಾಧಿಕಾರಿ ಸಂಗಮೇಶ ಪಾಟೀಲ, ಉಪವಲಯ ಅರಣ್ಯ ಅಧಿಕಾರಿ ಆನಂದ ರಾಠೋಡ, ಅನಿಲ ಆಚಾರಟ್ಟಿ, ಗುಂದ ಅರಣ್ಯ ಸಮಿತಿ ಅಧ್ಯಕ್ಷೆ ವಂದನಾ ದುಮೆ ಮತ್ತು ಮೌಳಂಗಿ ಗ್ರಾಮೀಣ ಸಮಿತಿಯ ಅಧ್ಯಕ್ಷ ವನೋದ ಮೈನಾಗೋಲ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net