ಹಾವು ಕಚ್ಚಿಕೂಲಿಕಾರ್ಮಿಕ ಸಾವು

sneke bite
Published on

ಯಡ್ರಾಮಿ: ಹಾವು ಕಡಿದು ಕಾರ್ಮಿಕನೋರ್ವ ಮೃತಪಟ್ಟ ಘಟನೆ ತಾಲೂಕಿನ ಯತ್ನಾಳ ಗ್ರಾಮದಲ್ಲಿ ಶನಿವಾರ ಬೆಳಗ್ಗೆ ಜರುಗಿದೆ.

ಯತ್ನಾಳ ಗ್ರಾಮದ ಶರಣಪ್ಪ ಭೀಮಪ್ಪ ಬಡಗೇರ (34) ಮೃತ ಕಾರ್ಮಿಕ. 11ಗಂಟೆ ಸುಮಾರಿಗೆ ಹೊಲದಲ್ಲಿ ಕೆಲಸ ಮಾಡುವಾಗಿ ಹಾವು ಕಚ್ಚಿದ್ದು, ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದಾನೆ.

ಯಡ್ರಾಮಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net