

ಔರಾದ್: ಕೌಠಾ(ಬಿ ) ಗ್ರಾಮದ ರೈತ ಸೂರ್ಯಕಾಂತ ದೇವರೆ (೪೫) ಅವರಿಗೆ ಹಾವು ಕಡಿದು, ಮಂಗಳವಾರ ಮೃತಪಟ್ಟಿದ್ದಾರೆ. ಮಧ್ಯಾಹ್ನ ಕಬ್ಬಿನ ಬೆಳೆ ನೋಡಿ ಬರಲು ಹೋದಾಗ ಹಾವು ಕಡಿದಿದೆ. ತಕ್ಷಣ ಬೀದರ್‌ನ ಬ್ರಿಮ್ಸ್ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಗಿದೆ. ಆದರೆ ಚಿಕಿತ್ಸೆ ಫಲಕಾರಿ ಆಗದೆ ಹೆಚ್ಚಿನ ಚಿಕಿತ್ಸೆಗೆ ಹೈದರಾಬಾದ್‌ಗೆ ಒಯ್ದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಪತ್ನಿ, ಇಬ್ಬರು ಪುತ್ರರು, ಪುತ್ರಿಯನ್ನು ಅಗಲಿದ್ದಾರೆ. ಬುಧವಾರ ಸ್ವಗ್ರಾಮದಲ್ಲಿ ಅಂತ್ಯಕ್ರಿಯೆ ನೆರವೇರಿದೆ.