ಹಾವೇರಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ರಘುನಂದನ ಮೂತಿ೯ ನೇಮಕ

IMG-20221021-WA00342
Published on

ಹಾವೇರಿ ಬ್ರೇಕಿಂಗ್

ಹಾವೇರಿ ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ವರ್ಗಾವಣೆಯಾಗಿದ್ದು, ನೂ‌ತನ ಜಿಲ್ಲಾಧಿಕಾರಿಯಾಗಿ ರಘುನಂದನ ಮೂರ್ತಿ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಶುಕ್ರವಾರ ರಾತ್ರಿ ಆದೇಶ ಹೊರಡಿಸಿದೆ.

ರಘುನಂದನ ಮೂತಿ೯ ಬೆಂಗಳೂರಲ್ಲಿ ವಾಣಿಜ್ಯ ತೆರಿಗೆ ಇಲಾಖೆ ಹೆಚ್ಚುವರಿ ಕಮೀಷನರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಇದೀಗ ಇವರನ್ನು ಹಾವೇರಿ ಜಿಲ್ಲೆಯ ಜಿಲ್ಲಾಧಿಕಾರಿಯನ್ನಾಗಿ ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಇವರು 2014ರ ಬ್ಯಾಚ್‌ ನ ಐಎಎಸ್‌ ಅಧಿಕಾರಿಯಾಗಿದ್ದು, ಕಲಬುರಗಿ, ದಕ್ಷಿಣ ಕನ್ನಡ, ಕೊಪ್ಪಳ, ಮತ್ತಿತರೆಡೆಗಳಲ್ಲಿ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net