ಹಾವೇರಿಗೆ ಬಿಜೆಪಿಯಿಂದ ಪ್ರತ್ಯೇಕ ಪ್ರಣಾಳಿಕೆ ಬಿಡುಗಡೆ

IMG_20230507_211623
Published on

ಹಾವೇರಿ: ನಿಮ್ಮ ಮತ ನಮ್ಮ ಸಂಕಲ್ಪ ಎಂಬ ಧ್ಯೇಯ ವಾಕ್ಯದ ಅಡಿಯಲ್ಲಿ ಹಾವೇರಿ ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ‌ ಪ್ರಣಾಳಿಕೆಯನ್ನು ಬಿಡುಗಡೆ ಮಾಡಲಾಗಿದೆ ಎಂದ ಬಿಜೆಪಿ ಜಿಲ್ಲಾಧ್ಯಕ್ಷ ಸಿದ್ದರಾಜ ಕಲಕೋಟಿ ಹೇಳಿದರು.

ಹಾವೇರಿ ಜಿಲ್ಲಾ ಕೇಂದ್ರಕ್ಕೆ ಕುಡಿಯುವ ನೀರು, ವಸತಿ ರಹಿತರಿಗೆ ನಿವೇಶನ, ರಸ್ತೆ, ಚರಂಡಿ ವ್ಯವಸ್ಥೆ ಕಲ್ಪಿಸುವುದು. ಜಿಲ್ಲಾ ವೈದ್ಯಕೀಯ ಆಸ್ಪತ್ರೆ ಮತ್ತು ಕಾಲೇಜನ್ನು ಮಲ್ಟಿ ಸ್ಪೆಶಾಲಿಟಿ ಮಟ್ಟಕ್ಕೆ ಏರಿಸುವುದು, ಪಶು ಚಿಕಿತ್ಸಾಲಯ ಕೇಂದ್ರ ಉನ್ನತೀಕರಿಸುವುದು.

ರೈತರಿಗಾಗಿ ಅಪ್ಪರ ತುಂಗಾ ಯೋಜನೆ ಪೂರ್ಣಗೊಳಿಸುವುದು, ಹೊಸದಾಗಿ ಏತ ನೀರಾವರಿ ಮೂಲಕ ಕೆರೆಗಳನ್ನು ತುಂಬಿಸುವುದು, ಕೆರೆಗಳನ್ನು ತುಂಬಿಸುವುದು, ನೇರ ಮಾರುಕಟ್ಟೆ ಸ್ಥಾಪಿಸಲಾಗುವುದು ಎಂದರು.

ಹಾವೇರಿ ನಗರದ ೩೧ ವಾಡ್೯ಗಳಲ್ಲಿ ಸುಂದರವಾದ ಉದ್ಯಾನವನ, ಕೈಗಾರಿಕಾ, ವ್ಯಾಪಾರ ಸ್ನೇಹಿ ವಾತಾವರಣ ಸೃಷ್ಟಿಸುವುದು, ಯಾಲಕ್ಕಿ ಮಾಲೆಗೆ ಅಂತಾರಾಷ್ಟ್ರೀಯ ಮಾರುಕಟ್ಟೆ ಒದಗಿಸುವುದು ಸೇರಿದಂತೆ ಅನೇಕ ಅಂಶಗಳನ್ನು ಪ್ರಣಾಳಿಕೆಯಲ್ಲಿ ಸೇರಿಸಲಾಗಿದೆ ಎಂದರು.

ಹಾವೇರಿ ಬಿಜೆಪಿ ಅಭ್ಯರ್ಥಿ ಗವಿಸಿದ್ದಪ್ಪ ದ್ಯಾಮಣ್ಣವರ ಮಾತನಾಡಿ, ಪ್ರಣಾಳಿಕೆಯಲ್ಲಿ ತಿಳಿಸಿರುವ ಎಲ್ಲವನ್ನೂ ಚಾಚೂ ತಪ್ಪದೇ ಮಾಡುತ್ತೇನೆ. ಹೋದ ಕಡೆಗೆಲ್ಲ ಜನ ಅದ್ಧೂರಿಯಾಗಿ ಸ್ವಾಗತಿಸುತ್ತಿದ್ದಾರೆ. ಅವರೇ ಪ್ರಚಾರ ಮಾಡುತ್ತಿದ್ದಾರೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net