ಹಾವೇರಿಯಲ್ಲಿ ಧಾರಾಕಾರ ಮಳೆ

HAVERI RAIN
Published on

ಹಾವೇರಿ: ಕೆಲ ದಿನ ಬಿಡುವು ನೀಡಿದ್ದ ಮಳೆ ಮಂಗಳವಾರ ಸಂಜೆ ಜಿಲ್ಲಾದ್ಯಂತ ಧಾರಾಕಾರವಾಗಿ ಸುರಿಯಿತು.

ಗುಡುಗು, ಸಿಡಿಲಿನ ಆರ್ಭಟವಿತ್ತು. ಧಾರಾಕಾರ ಮಳೆಯಿಂದಾಗಿ ನಗರದಲ್ಲಿನ ಪ್ರಮುಖ ರಸ್ತೆಗಳು ಜಲಾವೃತಗೊಂಡು ವಾಹನ ಸವಾರರು ಪರದಾಡಬೇಕಾಯಿತು. ವಿವಿಧೆಡೆ ಚರಂಡಿಗಳು ತುಂಬಿದ್ದರಿಂದ ರಸ್ತೆಯಲ್ಲಿಯೇ ನೀರು ಹರಿಯಿತು. ತಗ್ಗು ಪ್ರದೇಶದ ಮನೆಗಳಿಗೂ ನೀರು ನುಗ್ಗಿದೆ. ವಿದ್ಯುತ್ ಸಹ ಕೈಕೊಟ್ಟಿದ್ದರಿಂದ ಜನಜೀವನ ಅಸ್ತವ್ಯಸ್ತವಾಗಿತ್ತು. ಜಿಲ್ಲೆಯ ರಾಣೆಬೆನ್ನೂರ, ಹಾನಗಲ್ಲ, ಶಿಗ್ಗಾಂವಿ ಹಾಗೂ ರಟ್ಟಿಹಳ್ಳಿ ತಾಲೂಕಿನಲ್ಲಿ ಭಾರಿ ಮಳೆಯಾಗಿದೆ.

ಕಂಗಾಲಾದ ರೈತರು: ಧಾರಾಕಾರ ಮಳೆಯಿಂದ ಈಗಾಗಲೇ ಕಟಾವು ಮಾಡಿದ್ದ ಗೆಜ್ಜೆಶೇಂಗಾ, ಮೆಕ್ಕೆಜೋಳವನ್ನು ರಕ್ಷಿಸಿಕೊಳ್ಳಲಾಗದೇ ಅನೇಕ ರೈತರು ಕಂಗಾಲಾಗಿದ್ದಾರೆ. ಇನ್ನು ಒಡೆದು ನಿಂತಿದ್ದ ಬಿಟಿ ಹತ್ತಿ ಮಣ್ಣು ಪಾಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net