

ಹಾಸನ: ಹಾಸನ ಜಿಲ್ಲೆಗೆ ನೂತನ ಜಿಲ್ಲಾಧಿಕಾರಿಯಾಗಿ ಸಿ. ಸತ್ಯಭಾಮಾ ಅವರನ್ನು ರಾಜ್ಯ ಸರ್ಕಾರ ನೇಮಿಸಿ ಸೋಮವಾರ ಆದೇಶ ಹೊರಡಿಸಿದೆ. ಈ ಹಿಂದೆ ಸಿ. ಸತ್ಯಭಾಮಾ ಅವರು ಬೆಂಗಳೂರಿನಲ್ಲಿ ಸೂಕ್ಷ್ಮ, ಅತಿಸೂಕ್ಷ್ಮ, ಸಣ್ಣ, ಮಧ್ಯಮ ವಾಣಿಜ್ಯ ಕೈಗಾರಿಕೆ ಇಲಾಖೆ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದರು.
ಹಾಸನ ಜಿಲ್ಲಾಧಿಕಾರಿಯಾಗಿದ್ದ ಎಂ.ಎಸ್. ಅರ್ಚನಾ ಅವರನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ನಿರ್ದೇಶಕರನ್ನಾಗಿ ನೇಮಿಸಿ ವರ್ಗಾವಣೆ ಮಾಡಿತ್ತು. ಖಾಲಿ ಇದ್ದ ಜಿಲ್ಲಾಧಿಕಾರಿ ಹುದ್ದೆಗೆ ಜು.4ರಿಂದ ಜಿಲ್ಲಾ ಪಂಚಾಯಿತಿ ಸಿಇಒ ಬಿ.ಆರ್. ಪೂರ್ಣಿಮಾ ಅವರನ್ನು ಪ್ರಬಾರಿಯಾಗಿ ನೇಮಕ ಮಾಡಲಾಗಿತ್ತು. ಇದೀಗ ಹಾಸನ ಜಿಲ್ಲೆಗೆ ಸಿ. ಸತ್ಯಭಾಮಾ ಅವರನ್ನು ಹಾಸನ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಲಾಗಿದೆ.