ಹಾಸನ ತಾಲೂಕನ್ನು ಬರ ಪಟ್ಟಿಗೆ ಸೇರಿಸಲು:ಶಾಸಕ ಹೆಚ್.ಪಿ.ಸ್ವರೂಪ್ ಒತ್ತಾಯ.

ಹಾಸನ ತಾಲೂಕನ್ನು ಬರ ಪಟ್ಟಿಗೆ ಸೇರಿಸಲು:ಶಾಸಕ ಹೆಚ್.ಪಿ.ಸ್ವರೂಪ್ ಒತ್ತಾಯ.
Published on

ಹಾಸನ : ತಾಲೂಕನ್ನು ಬರ ಪಟ್ಟಿಗೆ ಸೇರಿಸದೆ ಇರುವುದು ಸರಿಯದ ಕ್ರಮವಲ್ಲ.ಸರ್ಕಾರ ತಕ್ಷಣವೇ ಬರದ ಪಟ್ಟಿಗೆ ಸೇರಿಸಿ ಸೂಕ್ತ ಪರಿಹಾರ ನೀಡಬೇಕು ಎಂದು ಶಾಸಕ ಹೆಚ್.ಪಿ.ಸ್ವರೂಪ್ ಒತ್ತಾಯಿಸಿದರು.

ಬರ ಪಟ್ಟಿಗೆ ಸೇರಿಸುವ ಸಂಬಂಧ ಜಿಲ್ಲಾಧಿಕಾರಿ ಬಳಿ ಚರ್ಚೆ ಮಾಡಿ. ನಂತರ ಜಿಲ್ಲಾ ಉಸ್ತುವಾರಿ ಸಚಿವರ ಗಮನಕ್ಕೆ ತಂದಿದ್ದೇನೆ. ಎಂದ ಅವರು ನಗರಕ್ಕೆ ಕುಡಿಯವ ನೀರಿನ ಸಮಸ್ಯೆ ಸಂಬಂಧ ನಗರಸಭೆ ಅಧಿಕಾರಿಗಳ ಜೊತೆ ಚರ್ಚೆ ಮಾಡಿದ್ದೇನೆ. ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಶೀಘ್ರವೇ ಹೇಮಾವತಿ ಡ್ಯಾಂಗೆ ಭೇಟಿ ನೀಡಿ ನೀರು ಪೂರೈಕೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಶಾಸಕರ ಅನುದಾನದಡಿ 50 ಲಕ್ಷರೂ. ಹಣ ಬಿಡುಗಡೆಯಾಗಿದ್ದು, ಮೂಲಸೌಕರ್ಯ ಕಲ್ಪಿಸಲು ಕ್ರಿಯಾಯೋಜನೆ ಸಿದ್ಧಪಡಿಸಿ ಹಂತ ಹಂತವಾಗಿ ಕ್ಷೇತ್ರವನ್ನು ಅಭಿವೃದ್ಧಿಗೊಳಿಸಲಾಗುವುದು, ಸರ್ಕಾರ ಗ್ಯಾರಂಟಿ ಯೋಜನೆಗಳಿಂದಾಗಿ ಅನುದಾನ ಸಮರ್ಪಕವಾಗಿ ಅನುದಾನ ದೊರೆಯದ ಕಾರಣ ಅಭಿವೃದ್ಧಿ ಕಾರ್ಯಗಳಿಗೆ ತೊಡುಕಾಗಿದೆ. ಮುಂದಿನ ದಿನಗಳಲ್ಲಿ ನೆನೆಗುದಿಗೆ ಬಿದ್ದಿರುವ ಕಾಮಗಾರಿಗಳನ್ನು ಶೀಘ್ರದಲ್ಲಿ ಪೂರ್ಣಗೊಳಿಸಲು ಗಮನ ಹರಿಸಲಾಗಿದೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಔಷಧಿ ವ್ಯಾಪಾರಿಗಳ ಕ್ಷೇಮಾಭಿವೃದ್ಧಿ ಸಂಘದ ಸಣ್ಣ ಮಂಜೇಗೌಡ, ಜಿಲ್ಲಾ ಜೆಡಿಎಸ್ ವಕ್ತಾರ ಹೊಂಗೆರೆ ರಘು, ಜಿಲ್ಲಾ ಔಷಧ ವ್ಯಾಪಾರಿಗಳ ಕ್ಷೇಮಾಭಿವೃದ್ಧಿ ಸಂಘದ ಉಪಾಧ್ಯಕ್ಷ ಗಿರೀಗೌಡ ಇದ್ದರು.

ವರಿಷ್ಠರ ತೀರ್ಮಾನಕ್ಕೆ ಬದ್ಧ:

ಜೆಡಿಎಸ್-ಬಿಜೆಪಿ ಮೈತ್ರಿ ಕುರಿತು ಪ್ರತಿಕ್ರಿಯಿಸಿ, ನಮ್ಮ ನಾಯಕರು, ವರಿಷ್ಠರು, ಏನು ತೀರ್ಮಾನ ಕೈಗೊಳ್ಳುತ್ತಾರೋ ಅದಕ್ಕೆ ನಾನೂ ಬದ್ಧ. ಈ ಹಿಂದೆ ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ಪಕ್ಷಗಳ ಜೊತೆ ಸೇರಿ ನಾವು ಸರ್ಕಾರ ಮಾಡಿದ್ದೆವು. ಈಗ ಬಿಜೆಪಿ ಜೊತೆ ಹೊಂದಾಣಿಕೆ ಮಾಡಿಕೊಂಡರೂ, ಎಲ್ಲಾ ವರ್ಗಗಳೂ ಒಪ್ಪಲಿವೆ, ನಾವು ಎಲ್ಲರ ಜೊತೆ ಉತ್ತಮ ಸಂಬಂಧ ಇರಲಿದೆ. ನಾವು ಮೈತ್ರಿ ಮಾಡಿಕೊಂಡರೂ ಅಲ್ಪಸಂಖ್ಯಾತರನ್ನು ಕೈಬಿಡುವುದಿಲ್ಲ ಹಾಗು ಅಲ್ಪಸಂಖ್ಯಾತರೊಂದಿಗೆ ಚರ್ಚೆ ನಡೆಸಿ ತೀರ್ಮಾನ ಕೂಗೊಳ್ಳುತ್ತೇವೆ ಎಂದರು.

ಅರೋಗ್ಯ ಶಿಬಿರ ಯಶಸ್ವಿ:

ತಂದೆ ದಿ.ಹೆಚ್.ಎಸ್.ಪ್ರಕಾಶ್ ಅವರ ಹುಟ್ಟು ಹಬ್ಬದ ಸ್ಮರಣಾರ್ಥ ಹಮ್ಮಿಕೊಂಡಿದ್ದ ಬೃಹತ್ ಉಚಿತ ಆರೋಗ್ಯ ಶಿಬಿರ ಯಶಸ್ವಿಯಾಗಿದ್ದು, ಇದಕ್ಕೆ ಸಹಕರಿಸಿದ ಎಲ್ಲರಿಗೂ ಧನ್ಯವಾದ ತಿಳಿಸಿ, ನಂತರ ಶಿಬಿರದಲ್ಲಿ ಸುಮಾರು 8 ಸಾವಿರ ಮಂದಿ ಉಪಯೋಗ ಪಡೆದುಕೊಂಡಿದ್ದಾರೆ. ಕಣ್ಣು ಆಪರೇಷನ್‌ಗೆ 104 ಜನ ನೊಂದಣಿ ಮಾಡಿಸಿಕೊಂಡಿದ್ದು, ಈಗಾಗಲೇ ಅವರಿಗೆ ಬೆಳ್ಳೂರು ಬಿಜಿಎಸ್ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆ ಪ್ರಕ್ರಿಯೆ ನಡೆಯುತ್ತಿದೆ ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net