ಹಾಸನದಲ್ಲಿ ಪುನೀತ್ ಪುತ್ಥಳಿ ಅನಾವರಣ

ಹಾಸನದಲ್ಲಿ ಪುನೀತ್ ಪುತ್ಥಳಿ ಅನಾವರಣ
Published on

ಹಾಸನ : ನಗರದ ಎನ್.ಆರ್.ವೃತ್ತದ ಬಳಿ ಸ್ಥಾಪಿಸಿರುವ ಡಾ. ಪುನೀತ್ ರಾಜ್‌ಕುಮಾರ್ ಪುತ್ಥಳಿಯನ್ನು ಅವರ ಅಭಿಮಾನಿಗಳು ಶುಕ್ರವಾರ ಲೋಕಾರ್ಪಣೆಗೊಳಿಸಿದರು.

ಶಾಸಕ ಪ್ರೀತಂ ಜೆ.ಗೌಡ, ನಗರಸಭೆ ಹಾಗೂ ದಾನಿಗಳ ನೆರವಿನೊಂದಿಗೆ ಡಾ.ರಾಜ್‌ಕುಮಾರ್, ಶಿವರಾಜ್‌ಕುಮಾರ್ ಮತ್ತು ಪುನೀತ್ ರಾಜ್‌ಕುಮಾರ್ ಅಭಿಮಾನಿಗಳು ಪುತ್ಥಳಿ ಸ್ಥಾಪಿಸಿದ್ದು ಅನಾವರಣ ಸಂದರ್ಭ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು. ತಮ್ಮ ನೆಚ್ಚಿನ ನಾಯಕನ ಹುಟ್ಟು ಹಬ್ಬದ ಅಂಗವಾಗಿ ಸಾರ್ವಜನಿಕರಿಗೆ ಅನ್ನದಾನ ಮಾಡಿ ಸಂಭ್ರಮಿಸಿದರು.

ಈ ವೇಳ ಪುನೀತ್ ಅಭಿಮಾನಿಗಳ ಸಂಘದ ಅಧ್ಯಕ್ಷ ಶ್ರೀನಿವಾಸ್ ಮೂರ್ತಿ ಮಾತನಾಡಿ, ಜಿಲ್ಲೆಯ ಜನರ ಆಶೀರ್ವಾದದಿಂದ ಪುನೀತ್ ಜನ್ಮದಿನದ ಅಂಗವಾಗಿ ಪುತ್ಥಳಿ ಅನಾವರಣ ಮಾಡಲಾಗಿದೆ. ಈ ಕಾರ್ಯಕ್ಕೆ ಸಹಕರಿಸಿದ ಶಾಸಕರು ಹಾಗೂ ಎಲ್ಲ ಮುಖಂಡರಿಗೆ ಕೃತಜ್ಞತೆ ಸಲ್ಲಿಸುತ್ತೇವೆ. ಅನೇಕ ವರ್ಷಗಳಿಂದ ಡಾ. ರಾಜಕುಮಾರ್ ಪ್ರತಿಮೆ ನಿರ್ಮಾಣ ಮಾಡಬೇಕೆಂದು ಅಭಿಲಾಶೆ ಹೊಂದಿದ್ದರೂ ಸಾಧ್ಯವಾಗಿರಲಿಲ್ಲ. ಆದರೆ ಪುನೀತ್ ಪುತ್ಥಳಿ ಅನಾವರಣದ ಮೂಲಕ ನೆಮ್ಮದಿ ಕಂಡುಕೊಂಡಿದ್ದು ಅವರ ಆತ್ಮಕ್ಕೆ ಚಿರಶಾಂತಿ ಲಭಿಸಿದೆ ಎಂದು ಭಾವಿಸಿದ್ದೇವೆ. ಮುಂದಿನ ದಿನಗಳಲ್ಲಿ ಡಾ. ರಾಜಕುಮಾರ್ ಅವರ ಪ್ರತಿಮೆ ಅನಾವರಣಕ್ಕೂ ಶ್ರಮಿಸುತ್ತೇವೆ ಎಂದರು.

ಈ ಸಂದರ್ಭ ಶಿವರಾಜ್ ಕುಮಾರ್ ಅಭಿಮಾನಿಗಳ ಸಂಘದ ಅಧಕ್ಷ ರತೀಶ್, ಕಿರಣ್‌ರಾಗ್, ರೂಪೇಶ್, ಯಶು, ನಾಗರಾಜ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net