ಹಾಸನದಲ್ಲಿ ವೈಭವದ ವೈಕುಂಠ ಏಕಾದಶಿ ಆಚರಣೆ

IMG_20200106_112012.JPG
Published on

ಹಾಸನ: ನಗರ ಸೇರಿದಂತೆ ಜಿಲ್ಲೆಯ ವಿವಿಧ ದೇವಾಲಯಗಳಲ್ಲಿ ವೈಕುಂಠ ಏಕಾದಶಿ ಪೂಜೆ ನೆರವೇರಿತು.

ಹಾಸನದ ಸೀತಾರಾಮಾಂಜನೇಯ, ವಿಜಯ ನಗರದ ಲಕ್ಷ್ಮಿ ವೆಂಕಟೇಶ್ವರ, ರಾಮನಾಥಪುರದ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದಲ್ಲಿ ಬೆಳಗ್ಗೆಯಿಂದಲೇ ಸಾರ್ವಜನಿಕರು ಬಂದು ದೇವರ ದರ್ಶನ ಪಡೆದರು.

ದೇವಾಲಯದ ಆವರಣದಲ್ಲಿ ವೈಕುಂಠ ಮಹಾದ್ವಾರ ನಿರ್ಮಾಣ ಮಾಡಲಾಗಿದೆ.

ಗೋವಿಂದ ನಾಮಸ್ಮರಣೆ ಮಾಡುತ್ತ ಪ್ರಾರ್ಥನೆಯಲ್ಲಿ ಭಕ್ತರು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net