

ಕಲಬುರಗಿ: ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯಗಳಲ್ಲಿ ಕನಿಷ್ಠ ವೇತನಕ್ಕೆ ಕೆಲಸ ಮಾಡುವವರಿಗೆ ಸಮಾನ ಕೆಲಸಕ್ಕೆ ಸಮಾನ ವೇತನ ನೀಡಲು ಆಗ್ರಹಿಸಿ ನಗರದ ಸಮಾಜ ಕಲ್ಯಾಣ ಇಲಾಖೆ ಜಿಲ್ಲಾ ಕಚೇರಿ ಎದುರು ಸಮಾಜ ಕಲ್ಯಾಣ ಇಲಾಖೆ ವಸತಿ ನಿಲಯಗಳ ದಿನಗೂಲಿ, ಕನಿಷ್ಠ ವೇತನ ನೌಕರರ ಸಂಘದಿAದ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.
ವಸತಿ ನಿಲಯಗಳಲ್ಲಿ ಅಡುಗೆಯವರು, ಅಡುಗೆ ಸಹಾಯಕರು, ಕಾವಲುಗಾರರಾಗಿ ಹಲವು ವರ್ಷದಿಂದ ಕೆಲಸ ಮಾಡುತ್ತಿದ್ದಾರೆ. ಆರು ತಿಂಗಳಿAದ ಯಾವುದೇ ಸಿಬ್ಬಂದಿಗೆ ವೇತನ ನೀಡಿಲ್ಲ. ಇದರಿಂದ ನಮ್ಮ ಕುಟುಂಬಗಳು ಆರ್ಥಿಕ ತೊಂದರೆಯಲ್ಲಿವೆ ಎಂದು ಅಳಲು ತೋಡಿಕೊಂಡರು.
೨೦೦೯ರ ಕಾರ್ಮಿಕ ಇಲಾಖೆಯ ಆದೇಶದಂತೆ ಸಮಾನ ಕೆಲಸಕ್ಕೆ ಸಮಾನ ವೇತನ ನೀಡುವಂತೆ ನಿರ್ದೇಶಿಸಿ ಆದೇಶಿಸಲಾಗಿದೆ. ಸಮಾಜ ಕಲ್ಯಾಣ ಇಲಾಖೆ ಆಯುಕ್ತರೂ ೨೦೦೯ರಲ್ಲಿ ವೇತನ ನೀಡಬೇಕು. ನೀಡದಿದ್ದಲ್ಲಿ ಸಂಬAಧಿಸಿದ ಅಧಿಕಾರಿಗಳೇ ಹೊಣೆ ಎಂದು ಆದೇಶಿಸಿದ್ದರು. ಆದರೆ, ಇದುವರೆಗೂ ಸಂಬAಧಿಸಿದ ಅಧಿಕಾರಿಗಳು ನಿರ್ಲಕ್ಷಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬೇಡಿಕೆ ಈಡೇರಿಸದಿದ್ದರೆ ಆ.೨೪ ರಂದು ಜಿ¯್ಲೆಗೆ ಆಗಮಿಸುತ್ತಿರುವ ಮುಖ್ಯಮಂತ್ರಿಗಳಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಬೇಡಿಕೆಗಳ ಮನವಿ ಪತ್ರವನ್ನು ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರ ಮೂಲಕ ಸಿಎಂಗೆ ಮನವಿ ಪತ್ರ ಸಲ್ಲಿಸಲಾಯಿತು.
ಪ್ರಮುಖರಾದ ಚಂದ್ರಶೇಖರ ಕೋಳಿಗೇರಿ, ದಶರಥ ಕಲಗುರ್ತಿ, ಮಹೇಶ, ಮಲ್ಲಿಕಾರ್ಜುನ, ಬಾಬು, ಖಾಜಾಪಾಶಾ, ಶಶಿಕಾಂತ, ಸುಜಾತಾ, ರಾಜಶ್ರೀ, ಶೋಭಾ ಇತರರಿದ್ದರು.