ಚಾಮರಾಜನಗರ: ಗುಂಡ್ಲುಪೇಟೆ ತಾಲೂಕಿನ ಸಮಾಜ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ನಿರ್ವಹಣೆಯ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ಪೂರ್ವ/ನಂತರ ಬಾಲಕರ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯದಲ್ಲಿ 5 ರಿಂದ 10ನೇ ಮತ್ತು ಪಿಯು, ಪದವಿ ತರಗತಿಯವರೆಗಿನ ವಿದ್ಯಾರ್ಥಿಗಳ ಪ್ರವೇಶಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಹೊಸದಾಗಿ ಪ್ರವೇಶ ಬಯಸುವವರು ವೆಬ್‌ಸೈಟ್ ಮೂಲಕ ಜೂ.30 ರೊಳಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಗುಂಡ್ಲುಪೇಟೆ ತಾಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರನ್ನು ಮೊ.9480843091 ಸಂಪರ್ಕಿಸಲು ಪ್ರಕಟಣೆಯಲ್ಲಿ ಕೋರಲಾಗಿದೆ.