ಹಾಸ್ಟೆಲ್ ಮಕ್ಕಳ ಆರೋಗ್ಯದ ಕಡೆ ಗಮನಹರಿಸಿ

15rajesh13
Published on

ಚಾಮರಾಜನಗರ: ವಿದ್ಯಾರ್ಥಿ ನಿಲಯಗಳಲ್ಲಿರುವ ಮಕ್ಕಳು ಆರೋಗ್ಯ ಮತ್ತು ಶುಚಿತ್ವದ ಕಡೆ ಹೆಚ್ಚು ಗಮನ ಹರಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮೋನಾ ರೋತ್ ತಿಳಿಸಿದರು.

ನಗರದ ದೇವರಾಜು ಅರಸು ಭವನದಲ್ಲಿ ಜಿಲ್ಲಾಡಳಿತ, ಜಿ.ಪಂ.ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ನಿಲಯ ಪಾಲಕರು, ನಿಲಯ ಮೇಲ್ವಿಚಾರಕರು, ಅಡುಗೆಯವರು ಹಾಗೂ ಅಡುಗೆ ಸಹಾಯಕರಿಗೆ ಶುಕ್ರವಾರ ಆಯೋಜಿಸಿದ್ದ ಒಂದು ದಿನದ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.

ಮಕ್ಕಳ ಶೈಕ್ಷಣಿಕ ಗುಣಮಟ್ಟಕ್ಕೆ ಆರೋಗ್ಯ ಮತ್ತು ಶುಚಿತ್ವ ಅವಶ್ಯಕತೆವಾಗಿದ್ದು, ಈ ನಿಟ್ಟಿನಲ್ಲಿ ನಿಲಯ ಪಾಲಕರು ಉತ್ತಮ ಗುಣಮಟ್ಟದ ಆಹಾರ ನೀಡಬೇಕು ಹಾಗೂ ನೈರ್ಮಲ್ಯದ ಕಡೆಗೆ ಹೆಚ್ಚು ಗಮನ ಹರಿಸಬೇಕು ಎಂದು ಸಲಹೆ ನೀಡಿದರು.

ಕಾರ್ಯಗಾರದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಚಿದಂಬರ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿ ವಿಶ್ವನಾಥ್, ಆಹಾರ ಸುರಕ್ಷತಾ ಅಧಿಕಾರಿ ಡಾ.ರವೀಂದ್ರ, ತಾಲೂಕು ಅಧಿಕಾರಿ ಲಿಂಗರಾಜು, ನಿವೃತ್ತ ನಿಲಯಪಾಲಕಿ ಮಂಜುಳ ಹಾಗೂ ಇತರರು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net