ಹಾಸ್ಟೆಲ್ ವಿದ್ಯಾರ್ಥಿಗಳ ಪ್ರತಿಭಟನೆ

16
Published on

ಮೈಸೂರು: ಮೂಲಸೌಲಭ್ಯ ಕಲ್ಪಿಸುವಂತೆ ಒತ್ತಾಯಿಸಿ ಮಹಾರಾಜ ಕಾಲೇಜು ಹಾಸ್ಟೆಲ್ ವಿದ್ಯಾರ್ಥಿಗಳು ಎಐಡಿಎಸ್‌ಒ ನೇತೃತ್ವದಲ್ಲಿ ಮೈಸೂರು ವಿಶ್ವವಿದ್ಯಾಲಯದ ಕ್ರಾರ್ಫಡ್ ಭವನದ ಮುಂದೆ ಮಂಗಳವಾರ ಪ್ರತಿಭಟನೆ ನಡೆಸಿದರು.
ಹಾಸ್ಟೆಲ್‌ಗಳಲ್ಲಿ ಮೂಲಸೌಕರ್ಯ ಇಲ್ಲದೇ ಇರುವ ಬಗ್ಗೆ ಅಧಿಕಾರಿಗಳ ಗಮನಕ್ಕೆ ತಂದಿದ್ದರು ಕೂಡ, ಯಾವುದೇ ಸಮಸ್ಯೆಗಳನ್ನು ಪರಿಹರಿಸದೆ ಸಂಪೂರ್ಣ ನಿರ್ಲಕ್ಷ್ಯ ಧೋರಣೆ ತಾಳಿದ್ದಾರೆ ಎಂದು ದೂರಿದರು.
ಎರಡು ತಿಂಗಳಿನಿಂದ ಕುಡಿಯುವ ನೀರಿನ ಸಮಸ್ಯೆ ಇದೆ. ಶೌಚಗೃಹ ಅಶುಚಿತ್ವ, ಸರಿಯಾದ ಊಟದ ವ್ಯವಸ್ಥೆ ಇಲ್ಲ. ಇದನ್ನು ಕೇಳಿದರೆ ನಿರ್ಲಕ್ಷೃದ ಉತ್ತರ ನೀಡಲಾಗುತ್ತಿದೆ. ತಕ್ಷಣವೇ ಸಮಸ್ಯೆ ಬಗೆಹರಿಸಬೇಕು. ಇಲ್ಲವಾದರೆ ಹೋರಾಟ ತೀವ್ರಗೊಳಿಸಲಾಗುವುದು ಎಂದು ಎಚ್ಚರಿಸಿ ಕುಲಪತಿಗಳಿಗೆ ಮನವಿ ಸಲ್ಲಿಸಿದರು.
ಎಐಡಿಎಸ್‌ಒ ಜಿಲ್ಲಾ ಅಧ್ಯಕ್ಷ ಸುಭಾಷ್, ಕಾರ್ಯದರ್ಶಿ ಚಂದ್ರಕಲಾ, ವಿದ್ಯಾರ್ಥಿಗಳಾದ ರಂಜಿತ್, ಅಭಿಷೇಕ್, ಮಂಜುನಾಥ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net