ಹಾಸ್ಟೆಲ್ ವಿದ್ಯಾರ್ಥಿಗಳು, ಸಿಬ್ಬಂದಿಗೆ ಎರಡು ದಿನಗಳ ಕ್ರೀಡೆಗೆ ಚಾಲನೆ

15
Published on

ಮೈಸೂರು: ವಿದ್ಯಾರ್ಥಿಗಳ ದೈಹಿಕ ಬೆಳವಣಿಗೆಗೆ ಕ್ರೀಡೆ ಸಹಕಾರಿಯಾಗಿದ್ದು ಪ್ರತಿಯೊಬ್ಬ ವಿದ್ಯಾರ್ಥಿಯು ಯಾವುದಾದರೊಂದು ಕ್ರೀಡೆಯಲ್ಲಿ ಭಾಗವಹಿಸಬೇಕು ಎಂದು ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕಿ ಬಿ. ಮಾಲತಿ ಸಲಹೆ ನೀಡಿದರು
ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಿಂದ ಚಾಮುಂಡಿವಿಹಾರ ಕ್ರೀಡಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಎರಡು ದಿನಗಳ ವಸತಿ ಶಾಲೆ ಮತ್ತು ಕಾಲೇಜು ವಿದ್ಯಾರ್ಥಿಗಳು ಹಾಗೂ ನೌಕರರ ಜಿಲ್ಲಾಮಟ್ಟದ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು.
ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಪ್ರಥಮ ಬಾರಿಗೆ ಕ್ರೀಡಾ ಸ್ಪರ್ಧೆಗಳನ್ನು ಆಯೋಜನೆ ಮಾಡಿದ್ದು, ಇದರಿಂದ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಿ ಕ್ರಿಯಾಶೀಲರಾಗಿರಲು ಸಹಕಾರಿಯಾಗಿದೆ. ಸೋಲು, ಗೆಲುವನ್ನು ವಿದ್ಯಾರ್ಥಿಗಳು ಸಮನಾಗಿ ಸ್ಪೀಕರಿಸುವಂತೆ ಸಲಹೆ ನೀಡಿದರು.
ಮೈಸೂರು ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಗೋವಿಂದರಾಜು, ಅಂತರರಾಷ್ಟ್ರೀಯ ಕ್ರೀಡಾಪಟು ಧನುಷಾ, ಜಿಲ್ಲಾ ಸಮನ್ವಯಾಕಾರಿ ಹೇಮ್‌ಕುಮಾರ್, ಪದಾಧಿಕಾರಿಗಳಾದ ಆನಂದ್, ಗಣೇಶ್, ಗಣಪತಿ ಜಕಾತಿ, ಆಶಾ ಮಹಾಂತೇಶ್ ಮಾಟೋಳಿ, ಪ್ರಾಂಶುಪಾಲರಾದ ರಂಗನಾಥ್, ವಸಂತ, ಪ್ರಸನ್ನಕುಮಾರ್, ರಾಮ್‌ಶೆಟ್ಟಿ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net