ಹಾಸ್ಟೆಲ್ ಸೌಲಭ್ಯಕ್ಕೆ ಒತ್ತಾಯಿಸಿ ಪ್ರತಿಭಟನೆ

CTD 19 ABVP--0002
Published on

ಚಿತ್ರದುರ್ಗ: ವೃತ್ತಿಪರ ಕೋರ್ಸ್‌ಗಳಿಗೆ ಮ್ಯಾನೇಜ್‌ಮೆಂಟ್ ಕೋಟಾದಡಿ ಪ್ರವೇಶಾವಕಾಶ ಪಡೆದಿರುವ 2023-24ನೇ ಸಾಲಿನ ವಿದ್ಯಾರ್ಥಿಗಳಿಗೆ,ವಿದ್ಯಾರ್ಥಿ ನಿಲಯಗಳಲ್ಲಿ ಪ್ರವೇಶ ಕಲ್ಪಿಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್,ಕಾರ‌್ಯಕರ್ತರು ಸೋಮವಾರ ಡಿಸಿ ಕಚೇರಿ ಬಳಿ ಪ್ರತಿಭಟನೆ ನಡೆಸಿದರು.
ವಿದ್ಯಾರ್ಥಿ ನಿಲಯಗಳಲ್ಲಿ ಮ್ಯಾನೇಜ್‌ಮೆಂಟ್ ಕೋಟಾದಡಿ ಪ್ರವೇಶ ಪಡೆದಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶ ನೀಡು ವುದಿಲ್ಲವೆಂದು ಸಮಾಜ ಕಲ್ಯಾಣ ಇಲಾಖೆ ಆಯುಕ್ತರು ಹೊರಡಿಸಿರುವ ಸುತ್ತೋಲೆಯಲ್ಲಿ ತಿಳಿಸಿದ್ದಾರೆ. ಆದ್ದರಿಂದ ಸರ್ಕಾರ ಆಯುಕ್ತರ ಈ ಆದೇಶವನ್ನು ಕೂಡಲೇ ಹಿಂಪಡೆದು ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಅನುಕೂಲ ಮಾಡಿಕೊಡಬೇಕೆಂದು ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿ ದರು.
ಕನಕರಾಜ್ ಆರ್.ಕೋಡಿಹಳ್ಳಿ,ಗೋಪಿ,ಯುವರಾಜ್‌ಹೆಗಡೆ,ಬಿ.ದಾನೇಶ್,ಅಜಯ್,ಹನುಮಂತ,ಚಿದಾನಂದ,ಅಜಯ್‌ಕುಮಾರ್, ಮಣಿಕಂಠ,ರಮೇಶ್ ಮತ್ತಿತರ ಪರಿಷತ್ ಪ್ರಮುಖರು ಪ್ರತಿಭಟನೆ ನೇತೃತ್ವ ವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net