ಹಾಸ್ಟೆಲ್‌ಗಳ ಪ್ರವೇಶಕ್ಕೆ ಒತ್ತಾಯ

CTD ABVP
Published on

ಚಿತ್ರದುರ್ಗ: ಹಾಸ್ಟೆಲ್ ಪ್ರವೇಶ, ಸಮರ್ಪಕ ವಿದ್ಯಾರ್ಥಿ ವೇತನ ವಿತರಣೆ ಮತ್ತು ಪದವಿ ಕಾಲೇಜುಗಳಿಗೆ ಉಪನ್ಯಾಸಕರ ನೇಮಕಕ್ಕೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ‌್ಯಕರ್ತರು ಶುಕ್ರವಾರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಪದವಿ ಪೂರ್ವ ಕಾಲೇಜು ತರಗತಿಗಳು ಆರಂಭವಾಗಿ ಎರಡು ತಿಂಗಳು ಕಳೆದಿವೆ ಹಾಗೂ ಪದವಿ ತರಗತಿಗಳು ಪ್ರಾರಂಭವಾಗಿದ್ದರೂ ಹಾಸ್ಟೆಲ್ ಪ್ರವೇಶ ಪ್ರಾರಂಭವಾಗದೆ ಬಡ ಪ್ರತಿಭಾವಂತ ವಿದ್ಯಾರ್ಥಿಗಳು ತೊಂದರೆಯಾಗಿದೆ. ಆದ್ದರಿಂದ ಕೂಡಲೇ ಪ್ರವೇಶ ಪ್ರಕ್ರಿಯೆ ಪ್ರಾರಂಭಿಸಬೇಕು ಹಾಗೂ ಹಾಸ್ಟೆಲ್‌ಗಳ ಸಂಖ್ಯೆಯನ್ನು ಹೆಚ್ಚಿಸುವುದು ನಾನಾ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿದರು.
ರಾಜ್ಯ ಸಮಿತಿ ಸದಸ್ಯ ಕನಕರಾಜ್ ಕೋಡಿಹಳ್ಳಿ, ಮುಖಂಡರಾದ ಚಿತ್ರಸ್ವಾಮಿ, ದಯಾನಂದ್, ಮನೋಜ್, ಚರಣ್, ನಂದೀಶ್ ಮತ್ತಿತರ ಕಾರ‌್ಯಕರ್ತರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net