

ಕಲಬುರಗಿ: ವಸತಿ ನಿಲಯಗಳಲ್ಲಿ ಆಯ್ಕೆ ಪ್ರಕ್ರಿಯೆಯಲ್ಲಿ ವಿಳಂಬ, ಕಳೆದ ವರ್ಷದ ವಿದ್ಯಾರ್ಥಿ ವೇತನ ಸರಿಯಾಗಿ ಬಿಡುಗಡೆ ಮಾಡದ ರಾಜ್ಯ ಸರ್ಕಾರದ ಕ್ರಮವನ್ನು ವಿರೋಧಿಸಿ ನಗರದ ನೂತನ ಆರ್‌ಟಿಓ ಕಚೇರಿ ವೃತ್ತದ ಬಳಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ನಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು.
ವೃತ್ತದ ಬಳಿ ಬುಧವಾರ ನೂರಾರು ವಿದ್ಯಾರ್ಥಿಗಳೊಂದಿಗೆ ರಸ್ತೆ ಸಂಚಾರ ತಡೆದು ಸರ್ಕಾರದ ವಿರುದ್ಧ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು.
ವಿಭಾಗ ಸಂಘಟನಾ ಕಾರ್ಯದರ್ಶಿ ಪಾಂಡು ಮೋರೆ ಮಾತನಾಡಿ, ವಿದ್ಯಾರ್ಥಿ ವೇತನ ನೀಡದೆ ಅನ್ಯಾಯ ಮಾಡಲಾಗುತ್ತಿದೆ. ಬಡ ವಿದ್ಯಾರ್ಥಿಗಳಿಗೆ ಮೂಲಸೌಲಭ್ಯ ಒದಗಿಸುತ್ತಿಲ್ಲ. ಶಾಲೆ, ಕಾಲೇಜು, ಪ್ರೌಢ ಶಾಲೆಗಳು ಆರಂಭವಾಗಿ ಮೂರು ತಿಂಗಳವರೆಗೆ ವಸತಿ ಪ್ರವೇಶ ದೊರೆಯುತ್ತಿಲ್ಲ. ಸರ್ಕಾರ, ಅಧಿಕಾರಿಗಳು ಪ್ರವೇಶ ಪ್ರಕ್ರಿಯೆಗೆ ವೇತ ನೀಡಬೇಕು ಎಂದು ಆಗ್ರಹಿಸಿದರು.
ವಸತಿ ನಿಲಯಕ್ಕೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಲ್ಲಿ ಶೇ.೪೦ ವಿದ್ಯಾರ್ಥಿಗಳಿಗೆ ಮಾತ್ರ ವ್ಯವಸ್ಥೆ ದೊರೆಯುತ್ತಿದೆ. ಗ್ರಾಮೀಣ ಭಾಗದಲ್ಲಿ ವಿದ್ಯಾರ್ಥಿಗಳು ವ್ಯವಸ್ಥೆಯಿಂದ ವಂಚಿತರಾಗುತ್ತಿದ್ದಾರೆ. ಕೂಡಲೇ ಸರ್ಕಾರ ವಿಶೇಷ ಅನುದಾನ ನೀಡಿ ವಸತಿ ನಿಲಯಗಳ ಸಂಖ್ಯೆ ಹೆಚ್ಚಿಸಬೇಕು ಎಂದರು.
ರಾಜ್ಯದಲ್ಲಿ ಸಮಾಜ ಕಲ್ಯಾಣ ಹಿಂದುಳಿದ ವರ್ಗ ಹಾಗೂ ಅಲ್ಪಸಂಖ್ಯಾತ ಇಲಾಖೆಗಳ ಹಾಸ್ಟೆಲï ಗಳ ಸಂಖ್ಯೆಯನ್ನು ಹೆಚ್ಚಳ ಮಾಡಬೇಕು. ಬಾಕಿ ಉಳಿದಿರುವ ಹಿಂದಿನ ವರ್ಷದ ವಿದ್ಯಾರ್ಥಿ ವೇತನವನ್ನು ತP್ಷÀಣವೇ ವಿದ್ಯಾರ್ಥಿಗಳ ಖಾತೆಗೆ ಜಮೆ ಮಾಡಬೇಕು ಎಂದು ಆಗ್ರಹಿಸಿದರು.
ಪ್ರಾಂತ ಸಹ ಸಂಘಟನಾ ಕಾರ್ಯದರ್ಶಿ ಗಂಗಾಧರ ಹಂಜಗಿ, ರಾಷ್ಟಿçÃಯ ಕಾರ್ಯಕಾರಿಣಿ ಸದಸ್ಯ ಹನುಮಂತ ಬಗಲಿ, ಅರುಣಾ, ಶಿವಾನಿ, ದಿಲೀಪ, ಅನಿಕೇತ ತರುಣ, ಸಂತೋಷ, ಅರ್ಜುನ ಇತರರಿದ್ದರು.