

ಬಾಗಲಕೋಟೆ: ಪ್ರಸಕ್ತ ಸಾಲಿನ ಹಿಂಗಾರು ಹಾಗೂ ಬೇಸಿಗೆ ಹಂಗಾಮಿಗಾಗಿ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯಡಿ ರೈತರು ಅಽಸೂಚಿತ ಬೆಳೆಗಳಿಗೆ ನೋಂದಣಿ ಮಾಡಿಸಲು ಸರ್ಕಾರವು ಅಽಸೂಚನೆಯನ್ನು ಹೊರಡಿಸಿದೆ ಎಂದು ಜಿಲ್ಲಾಽಕಾರಿ ಜಾನಕಿ ಕೆ.ಎಂ ಹೇಳಿದರು.
ಜಿಲ್ಲಾಽಕಾರಿಗಳ ಸಭಾಭವನದಲ್ಲಿ ಬುಧವಾರ ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಯೋಜನೆ ಅನುಷ್ಠಾನ ಕುರಿತ ಜಿಲ್ಲಾ ಮಟ್ಟದ ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅಽಸೂಚಿತ ಬೆಳೆಗೆ ಬೆಳೆಸಾಲ ಪಡೆದ ರೈತರಿಗೆ ಈ ಯೋಜನೆ ಕಡ್ಡಾಯವಾಗಿದ್ದು, ಬೆಳೆಸಾಲ ಪಡೆದ ರೈತರು ಈ ಯೋಜನೆಯಡಿ ಭಾಗವಹಿಸಲು ಇಚ್ಚೆಪಡದೆ ಇದ್ದಲ್ಲಿ, ಈ ಕುರಿತು ಬೆಳೆಸಾಲ ಪಡೆದ ಬ್ಯಾಂಕಿನ ವ್ಯವಸ್ಥಾಪಕರಿಗೆ ಬೆಳೆ ನೋಂದಣಿಯ ಅಂತಿಮ ದಿನಾಂಕಕ್ಕಿಂತ ೭ ದಿನಗಳ ಮುಂಚಿತವಾಗಿ ಲಿಖಿತವಾಗಿ ಮುಚ್ಚಳಿಕೆ ಪತ್ರವನ್ನು ನೀಡಿದಲ್ಲಿ ಅಂತಹ ರೈತರನ್ನು ಬೆಳೆವಿಮೆ ಯೋಜನೆಯಿಂದ ಕೈಬಿಡಲಾಗುತ್ತದೆ ಎಂದರು.
ಬೆಳೆಸಾಲ ಪಡೆಯದ ರೈತರಿಗೆ ಬೆಳೆವಿಮೆ ಯೋಜನೆಯು ಐಚ್ಛಿಕವಾಗಿರುತ್ತದೆ. ಪ್ರಸಕ್ತ ಸಾಲಿನಲ್ಲಿ ಜಿಲ್ಲೆಗೆ ಯುನಿವರ್ಸಲ್ ಸೊಂಪೊ ಜಿ.ಐ.ಸಿ. ವಿಮಾ ಕಂಪನಿ ಆಯ್ಕೆಯಾಗಿದ್ದು, ಆಸಕ್ತ ರೈತರು ಕೊನೆಯ ದಿನಾಂಕದವರೆಗೆ ಕಾಯ್ದೆ ಅಽಸೂಚಿತ ಬೆಳೆಗೆ ಹತ್ತಿರದ ಬ್ಯಾಂಕಿನಲ್ಲಿ ವಿಮಾ ಕಂತು ತುಂಬಿ ಬೆಳೆಗೆ ವಿಮೆಗೆ ಒಳಪಡಿಸಬೇಕು. ಪ್ರಸಕ್ತ ಸಾಲಿನಿಂದ ಬೆಳೆ ವಿಮೆ ಮಾಡಿಸುವ ರೈತರು ಪ್ರೂಟ್ಸ್ ತಂತ್ರಾಂಶದ ಎಫ್‌ಐಡಿ ಹೊಂದಿರುವುದು ಕಡ್ಡಾಯವಾಗಿದೆ ಎಂದು ತಿಳಿಸಿದರು.
ಬೆಳೆ ವಿಮೆ ಯೋಜನೆಯ ಹೆಚ್ಚಿನ ಮಾಹಿತಿಗಾಗಿ ಸಮೀಪದ ರೈತ ಸಂಪರ್ಕ ಕೇಂದ್ರ, ತಾಲೂಕ ಕೃಷಿ, ತೋಟಗಾರಿಕೆ ಇಲಾಖೆ ಹಾಗೂ ಬೆಳೆ ವಿಮೆ ಸಂಸ್ಥೆ ಕಛೇರಿ ಹಾಗೂ ಬೆಳೆ ವಿಮೆ ಕಂಪನಿಯ ತಾಲೂಕು ಪ್ರತಿನಿಗಳಾದ ಬಾದಾಮಿ ಮತ್ತು ಗುಳೇದಗುಡ್ಡಕ್ಕೆ ಸಂಗಪ್ಪ ಬನ್ನಿ (೯೯೬೪೩೯೭೫೭೭), ಹುನಗುಂದ, ಇಳಕಲ್ಲಗೆ ಸಂತೋಷ ಕಮತಗಿ (೮೧೫೧೦೭೪೯೩೦) ಬಾಗಲಕೋಟೆ ಮತ್ತು ಬೀಳಗಿಗೆ ಬಸವರಾಜ ಧೂಪದ (೯೦೩೬೬೨೦೮೧೪), ಜಮಖಂಡಿ ಮತ್ತು ರಬಕವಿ-ಬನಹಟ್ಟಿಗೆ ಮಹಾಂತೇಶ ನಾಗಠಾಣ (೮೯೭೧೫೪೪೮೨೯), ಮುಧೋಳ ತಾಲೂಕಿಗೆ ಅನೀಲ (೬೩೬೦೯೨೩೬೬೭) ಇವರನ್ನು ಸಂಪರ್ಕಿಸಬಹುದಾಗಿದೆ ಎಂದರು.
ರೈತರು ಬೆಳೆ ವಿಮೆಯನ್ನು ತಮ್ಮ ಹತ್ತಿರದ ಬ್ಯಾಂಕಗಳು, ಸಾಮಾನ್ಯ ಸೇವಾ ಕೇಂದ್ರಗಳು, ಕರ್ನಾಟಕ್ ಒನ್ ಹಾಗೂ ಗ್ರಾಮ ಒನ್ ಕೇಂದ್ರಗಳಲ್ಲಿ ಮಾಡಿಸಬಹುದಾಗಿದೆ. ಸ್ಥಳ ನಿರ್ದಿಷ್ಟ ಪ್ರಕೃತಿ ವಿಕೋಪಗಳಾದ ಆಲಿಕಲ್ಲು ಮಳೆ, ಭೂಕುಸಿತ, ಬೆಳೆ ಮುಳುಗಡೆ (ಇನಂಡೇಶನ್), ಮೇಘಸ್ಪೋಟ ಮತ್ತು ಗುಡುಗು ಮಿಂಚುಗಳಿಂದ ಆಗುವ ಬೆಂಕಿ ಅವಘಡಗಳಿಂದ ಉಂಟಾಗುವ ನಷ್ಟದ ನಿರ್ಧರಣೆಯನ್ನು ವೈಯಕ್ತಿಕವಾಗಿ ನಿರ್ಧರಿಸಿ ಬೆಳೆ ವಿಮಾ ನಷ್ಟ ಪರಿಹಾರವನ್ನು ಇತ್ಯರ್ಥ ಪಡಿಸಲು ಯೋಜನೆಯಡಿ ಅವಕಾಶ ನೀಡಲಾಗಿದೆ. ಇಂತಹ ಸ್ಥಳೀಯ ಗಂಡಾಂತರಗಳ ಕಾರಣಗಳಿಂದ ಬೆಳೆ ನಷ್ಟ ಸಂಭವಿಸಿದರೆ, ಬೆಳೆ ವಿಮೆ ಮಾಡಿಸಿರುವ ರೈತರು ಈ ಬಗ್ಗೆ ನೇರವಾಗಿ ಸಂಬಂಧಪಟ್ಟ ಅನುಷ್ಠಾನಗೊಳಿಸುವ ವಿಮಾ ಸಂಸ್ಥೆಗಳ ಕಚೇರಿಗಳಿಗೆ ಅಥವಾ ಬ್ಯಾಂಕ್‌ಗಳಿಗೆ ಅಥವಾ ಕೃಷಿ, ತೋಟಗಾರಿಕೆ ಇಲಾಖೆ ಮೂಲಕ ತಕ್ಷಣ ಲಿಖಿತವಾಗಿ ಸೂಚನೆ ನೀಡತಕ್ಕದ್ದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ವಿಮೆ ಮಾಡಿಸಿದ ಬೆಳೆಯ ವಿವರಗಳನ್ನು, ಹಾನಿಯ ವ್ಯಾಪ್ತಿ ಹಾಗೂ ಹಾನಿಗೆ ಕಾರಣಗಳನ್ನು ೭೨ ಗಂಟೆಗಳೊಳಗಾಗಿ ತಿಳಿಸತಕ್ಕದ್ದು. ಈ ಯೋಜನೆಯಡಿ ೨೦೨೪ ರ ಹಿಂಗಾರು, ಬೇಸಿಗೆ ಹಂಗಾಮಿನÀಲ್ಲಿ ಕಟಾವಿನ ನಂತರ ಬೆಳೆಯನ್ನು ಜಮೀನಿನಲ್ಲೆ ಒಣಗಲು ಬಿಟ್ಟಂತಹ ಸಂದರ್ಭದಲ್ಲಿ ಕಟಾವು ಮಾಡಿದ ಎರಡು ವಾರಗಳೊಳಗೆ (ಹದಿನಾಲ್ಕು ದಿನಗಳು) ಚಂಡಮಾರುತ, ಚಂಡಮಾರುತ ಸಹಿತ ಮಳೆ ಮತ್ತು ಅಕಾಲಿಕ ಮಳೆಯಿಂದಾಗಿ ಬೆಳೆ ನಾಶವಾದರೆ ವೈಯಕ್ತಿಕವಾಗಿ ವಿಮಾ ಸಂಸ್ಥೆಯು ನಷ್ಟ ನಿರ್ಧಾರ ಮಾಡಿ ಬೆಳೆ ನಷ್ಟ ಪರಿಹಾರವನ್ನು ಇತ್ಯರ್ಥಪಡಿಸಲು ರಾಜ್ಯದ ಎಲ್ಲಾ ಜಿಲ್ಲೆಗಳನ್ನು ಒಳಪಡಿಸಲಾಗಿದೆ ಎಂದು ತಿಳಿಸಿದರು.
ಸಭೆಯಲ್ಲಿ ಕೃಷಿ ಇಲಾಖೆ ಜಂಟಿ ನಿರ್ದೇಶಕ ಲಕ್ಷ÷್ಮಣ ಕಳ್ಳೇನ್ನವರ, ತೋಟಗಾರಿಕೆ ಉಪನಿರ್ದೇಶಕ ರವೀಂದ್ರ ಹಕಾಟಿ, ಜಿಲ್ಲಾ ಅಂಕಿ ಸಂಖ್ಯಾಽಕಾರಿ ಗೌರಮ್ಮ ಸುಂಕದ, ಕೃಷಿ ಉಪನಿರ್ದೇಶಕ ರೂಢಗಿ ಸೇರಿದಂತೆ ಆಯಾ ತಾಲೂಕಿನ ಸಹಾಯಕ ಕೃಷಿ ಅಽಕಾರಿಗಳು ಹಾಗೂ ವಿಮಾ ಕಂಪನಿಯ ಪ್ರತಿನಿಽಗಳು ಉಪಸ್ಥಿತರಿದ್ದರು.