ಹಿಂಡಲಗಾ ಕಾರಾಗೃಹದಲ್ಲಿ ಕೈದಿ ಆತ್ಮಹತ್ಯೆ

Sucide
Published on

ಬೆಳಗಾವಿ: ನಗರದ ಹಿಂಡಲಗಾ ಕಾರಾಗೃಹದಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಕೈದಿಯೊಬ್ಬ ಚಿಕಿತ್ಸೆ ಫಲಿಸದೆ ಮಂಗಳವಾರ ತಡರಾತ್ರಿ ಮೃತಪಟ್ಟಿರುವ ಘಟನೆ ನಗರದಲ್ಲಿ ನಡೆದಿದೆ.

ಚಿತ್ರದುರ್ಗದ ಗಿರೀಶ.ಎನ್.ಆತ್ಮಹತ್ಯೆ ಮಾಡಿಕೊಂಡಿರುವ ಕೈದಿ. ಕೊಲೆ ಪ್ರಕರಣವೊಂದರಲ್ಲಿ ಶಿಕ್ಷೆಗೆ ಒಳಗಾಗಿ ಹಿಂಡಲಗಾ ಜೈಲಿನಲ್ಲಿದ್ದ ಕೈದಿ ಗಿರೀಶ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದನು. ಮಂಗಳವಾರ ಜೈಲಿನಲ್ಲಿಯೇ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ. ಇದನ್ನು ನೋಡಿದ ಸಹ ಕೈದಿಗಳು ಅಧಿಕಾರಿಗಳ ಗಮನಕ್ಕೆ ತಂದರು.

ತಕ್ಷಣವೇ ಆಂಬುಲೆನ್ಸ್ ಮೂಲಕ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ ಎಂದು ಹಿಂಡಲಗಾ ಜೈಲಾಧಿಕಾರಿಗಳು ತಿಳಿಸಿದ್ದಾರೆ. ಬೆಳಗಾವಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net