ಹಿಂದು ಧರ್ಮ ಭಾಷಣ ಸ್ಪರ್ಧೆಯಲ್ಲಿ ಪಾಲ್ಕಿಯ ಖಾನ್ ಪ್ರಥಮ

13
Published on

ಮೈಸೂರು: ಸ್ವಾಮಿ ವಿವೇಕಾನಂದರು ಅಮೆರಿಕದಲ್ಲಿ ವಿಶ್ವ ಸರ್ವಧರ್ಮ ಸಮ್ಮೇಳನದಲ್ಲಿ ಭಾಷಣ ಮಾಡಿದ್ದರ ನೆನಪಿಗಾಗಿ ಹಿಂದು ಧರ್ಮ ಕುರಿತು ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ‘ದಿಗ್ವಿಜಯ’ ರಾಜ್ಯ ಮಟ್ಟದ ಭಾಷಣ ಸ್ಪರ್ಧೆಯಲ್ಲಿ ಪಾಲ್ಕಿಯ ಖಾನ್ ಪ್ರಥಮ ಸ್ಥಾನ ಪಡೆದುಕೊಂಡರು.
ರಾಷ್ಟ್ರಭಾರತಿ ಚಾರಿಟಬಲ್ ಟ್ರಸ್ಟ್‌ನಿಂದ ನಗರದ ಮಾಧವ ಕೃಪಾದಲ್ಲಿ ಸೋಮವಾರ ಸ್ವಾಮಿ ವಿವೇಕಾನಂದರು 1893ರ ಸೆಪ್ಟೆಂಬರ್ 11 ರಂದು ಅಮೆರಿಕದಲ್ಲಿ ನಡೆದ ವಿಶ್ವ ಸರ್ವಧರ್ಮ ಸಮ್ಮೇಳನದಲ್ಲಿ ಭಾರತವನ್ನು ಪ್ರತಿನಿಧಿಸಿ ಭಾಷಣ ಮಾಡಿದ್ದರ ನೆನಪಿನಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಹರ್ಷಿತಾ (ದ್ವಿತೀಯ), ಹಂಸಾ (ತೃತೀಯ) ಬಹುಮಾನ ಪಡೆದುಕೊಂಡರು. ಶಶಾಂಕ್, ಲಜೀತ್ ಬಿ.ರಾಜ್(ಸಮಾಧಾನಕರ) ಬಹುಮಾನ ಪಡೆದುಕೊಂಡರು. ಮಾನಸಗಂಗೋತ್ರಿಯ ಸಹಾಯಕ ಪ್ರಾಧ್ಯಾಪಕ ಪ್ರವೀಣ್ ತೀರ್ಪುಗಾರಾಗಿದ್ದರು. ಸ್ಫರ್ಧೆಯಲ್ಲಿ ವಿವಿಧ ಶಾಲಾ, ಕಾಲೇಜುಗಳಿಂದ 65 ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಟ್ರಸ್ಟ್‌ನ ಟ್ರಸ್ಟಿ ರುದ್ರಮೂರ್ತಿ ಅಧ್ಯಕ್ಷತೆ ವಹಿಸಿದ್ದರು. ವೈದ್ಯ ಡಾ.ಮನೋಜ್ ಮಂದಪ್ಪ, ಉದ್ಯಮಿ ಸತೀಶ್ ಪಾಂಡುರಂಗ ಬಹುಮಾನ ವಿತರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net