ಹಿಂದುಳಿದ ನಿಗಮಗಳಿಗೆ ಅನುದಾನ ನೀಡಿ

avanna mayakeri
Published on

ಕಲಬುರಗಿ: ರಾಜ್ಯದ ಹಿಂದುಳಿದ ವರ್ಗಗಳ ನಿಗಮಗಳಿಗೆ ಹಣ ನೀಡಿ ಇಲ್ಲವೇ ಮುಚ್ಚಿ ಬಿಡಿ ಘೋಷವಾಕ್ಯದೊಂದಿಗೆ ಡಿ.೧೨ರಂದು ನಗರದ ಸರ್ದಾರ್ ವಲ್ಲಭಬಾಯಿ ಪಟೇಲ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಪ್ರಧಾನ ಕಾರ್ಯದರ್ಶಿ ಅವ್ವಣ್ಣ ಮ್ಯಾಕೇರಿ ತಿಳಿಸಿದರು.

ಅಹಿಂದ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಸಿಎಂ ಸಿದ್ದರಾಮಯ್ಯ ಸರ್ಕಾರ ನಿಗಮಗಳಿಗೆ ಅನುದಾನ ಬಿಡುಗಡೆ ಮಾಡದೆ, ವಂಚಿಸುತ್ತಿದೆ. ಹಿಂದಿನ ಬಿಜೆಪಿ ಸರ್ಕಾರ ಸಾವಿರ ಕೋಟಿ ರೂ. ಅನುದಾನ ಬಿಡುಗಡೆ ಮಾಡಿತ್ತು. ಆದರೆ ಪ್ರಸ್ತುತ ಕಾಂಗ್ರೆಸ್ ಸರ್ಕಾರ ೧೫೦೦ ಕೋಟಿ ಘೋಷಿಸಿದ್ದು, ಕೇವಲ ೫೭.೦೪ ಕೋಟಿ ರೂ. ಮಾತ್ರ ಖರ್ಚು ಮಾಡಿದೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಹಿಂದುಳಿದ ವರ್ಗಗಳ ೧೧ ನಿಗಮಗಳಿದ್ದು, ಹಿಂದುಳಿದ ಹೂಗಾರ, ಕಂಬಾರ, ಕುಂಬಾರ, ಗಾಣಿಗ, ಹಡಪದ, ಈಡಿಗ ಮತ್ತು ಮಾಳಿ ಸೇರಿ ವಿವಿಧ ಸಮುದಾಯಗಳ ಜನರಿಗೆ ಯಾವುದೇ ಸೌಲಭ್ಯಗಳು ಒದಗಿಸಲು ಆಗುತ್ತಿಲ್ಲ. ಅರಿವು ಯೋಜನೆ ಅಡಿ ಬಡ ಮಕ್ಕಳ ಶಿಕ್ಷಣಕ್ಕೆ ಶೇ.೨ರಷ್ಟು ಬಡ್ಡಿಯಲ್ಲಿ ಸಾಲ ಕೊಡಲಾಗುತ್ತಿತ್ತು. ಆದರೆ ಪ್ರಸ್ತುತ ೧೯,೫೬೫ ಅರ್ಜಿ ಬಂದಿದ್ದು, ಇದುವರೆಗೆ ಒಬ್ಬರಿಗೂ ಸಾಲ ಸೌಲಭ್ಯ ನೀಡಿಲ್ಲ ಎಂದು ಹೇಳಿದರು.

ಕಾಡಾ ಮಾಜಿ ಅಧ್ಯಕ್ಷ ಶರಣಪ್ಪ ತಳವಾರ, ಓಬಿಸಿ ಗ್ರಾಮೀಣಾಧ್ಯಕ್ಷ ಮಲ್ಲಿಕಾರ್ಜುನ ಎಮ್ಮೆನೂರ, ನಗರ ಜಿಲ್ಲಾಧ್ಯಕ್ಷ ದೇವಿಂದ್ರ ಪೂಜಾರಿ, ಶರಣಗೌಡ ಪಾಟೀಲ್, ಬಸವರಾಜ ಗುಂಡಲಗೇರಿ, ಬಸವರಾಜ ಮದ್ರಿಕಿ, ಈರಣ್ಣ ಹಡಪದ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net