

ಬಾಗಲಕೋಟೆ: ಹಿಂದುಳಿದ ವರ್ಗಗಳ ಮೇಲೆ ಅಽಕಾರಕ್ಕೆ ಬಂದ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಹಿಂದುಳಿದ ವರ್ಗಕ್ಕೆ ತೀವ್ರ ಆಘಾತ ಉಂಟು ಮಾಡುತ್ತಿದ್ದಾರೆ. ಹಿಂದುಳಿದ ವರ್ಗಗಳ ನಿಗಮಕ್ಕೆ ಅನುಮಾನ ಕಡಿತಗೊಳಿಸುತ್ತಿದ್ದು, ಹೀಗಾಗಿ ಡಿ. ೧೩ ರಂದು ಜಿಲ್ಲಾಽಕಾರಿ ಕಚೇರಿ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಒಬಿಸಿ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂಗಮೇಶ ಹೂಗಾರ ಹೇಳಿದರು.
ನಗರದ ಪ್ರೆಸ್‌ಕ್ಲಬ್‌ನಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಮ್ಮ ಸ್ವಾರ್ಥ ರಾಜಕೀಯಕ್ಕಾಗಿ ಸಿಎಂ ಸಿದ್ದರಾಮಯ್ಯನವರು ಅಹಿಂದ ಬಗ್ಗೆ ಅಪಾರ ಕಾಳಜಿ ಇದೆ ಎಂದು ಡೋಂಗಿತನ ಪ್ರದರ್ಶಿಸುತ್ತಿದ್ದಾರೆ. ಬಿಜೆಪಿ ಸರ್ಕಾರದ ಅವಽಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇದ್ದಾಗ ೫೪೬ ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿತ್ತು. ಈಗ ಕಾಂಗ್ರೆಸ್ ಸರ್ಕಾರದ ಅವಽಯಲ್ಲಿ ೧೭೦ ಕೋಟಿ ರೂ. ಅಷ್ಟೇ ಬಿಡುಗಡೆಯಾಗಿದೆ ಎಂದರು.
ಓಬಿಸಿ ಮೋರ್ಚಾ ಜಿಲ್ಲಾಧ್ಯಕ್ಷ ಸಂಗಮೇಶ ದಳವಾಯಿ ಮಾತನಾಡಿ, ಹಿಂದುಳಿದ ವರ್ಗಗಳ ಇಲಾಖೆಗಳ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ವರ್ಗಾವಣೆ ಆಗುತ್ತಿದೆ. ಇದರಿಂದ ಹಿಂದುಳಿದ ವರ್ಗಗಳ ಸರಿಯಾದ ಸಾಮಾಜಿಕ ನ್ಯಾಯ ಒದಗಿಸಲಾಗುತ್ತಿದೆ ಎಂದು ತಿಳಿಸಿದರು.
ಮಹಿಳಾ ಮೋರ್ಚಾ ಜಿಲ್ಲಾ ಉಪಾಧ್ಯಕ್ಷೆ ಗೀತಾ ಸೂರ್ಯವಂಶಿ, ಶಿವಾನಂದ ಸುರಪುರ, ರಾಜು ಗೆಣ್ಣೂರ, ಶ್ರೀಕಾಂತ ಮಾಳಜಿ ಇತರರು ಇದ್ದರು.