ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಹೆಚ್ಚು ಅನುದಾನ

05-GPT-1
Published on

ಗುಂಡ್ಲುಪೇಟೆ: ತಾಲೂಕಿನ ಹಿಂದುಳಿದ ವರ್ಗಗಳ ಜನತೆಯ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡಲಾಗಿದೆ ಎಂದು ಶಾಸಕ ಸಿ.ಎಸ್.ನಿರಂಜನಕುಮಾರ್ ಹೇಳಿದರು.


ತಾಲೂಕಿನ ಹಸಗೂಲಿ ಗ್ರಾಮದಲ್ಲಿ ಭಾನುವಾರ ಸಾಮಾನ್ಯ ವರ್ಗದ ಬೀದಿಗಳಿಗೆ 50 ಲಕ್ಷ ರೂ.ವೆಚ್ಚದಲ್ಲಿ ಸಿಸಿ ರಸ್ತೆ ಹಾಗೂ 20 ಲಕ್ಷ ರೂ.ವೆಚ್ಚದಲ್ಲಿ ಉಪ್ಪಾರ ಸಮುದಾಯ ಭವನ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು. ಶಾಸಕನಾಗಿ ಆಯ್ಕೆಯಾದ ನಂತರ ಹಿಂದುಳಿದ ಉಪ್ಪಾರ ಜನಾಂಗದವರು ನೆಲೆಸಿರುವ ಭೀಮನಬೀಡು, ಕೂತನೂರು, ಮಲ್ಲಯ್ಯನಪುರ ಹಾಗೂ ಬೇಗೂರು ಗ್ರಾಮಗಳಲ್ಲಿ ಅಭಿವೃದ್ಧಿಗೆ ಶಾಸಕರ ಅನುದಾನದಲ್ಲಿ ತಲಾ 50 ಲಕ್ಷ ರೂ.ವೆಚ್ಚದಲ್ಲಿ ಮೂಲ ಸೌಕರ್ಯ ಕಲ್ಪಿಸಲಾಗಿದೆ. ಸಾಮಾನ್ಯ ವರ್ಗದ ಜನರು ವಾಸಿಸುವ ಬೀದಿಗಳಿಗೂ ಕಾಂಕ್ರೀಟ್ ರಸ್ತೆ ಹಾಗೂ ಚರಂಡಿ ನಿರ್ಮಾಣ ಮಾಡಲಾಗುತ್ತಿದೆ ಎಂದು ಹೇಳಿದರು.


ಪಿಕಾರ್ಡ್ ಬ್ಯಾಂಕ್ ಮಾಜಿ ನಿರ್ದೇಶಕ ಕುಮಾರ್, ಗ್ರಾಮ ಪಂಚಾಯಿತಿ ಸದಸ್ಯ ಪ್ರಸಾದ್, ಮಾಜಿ ಸದಸ್ಯ ಮಹೇಂದ್ರ, ಮುಖಂಡರಾದ ಹಸಗೂಲಿ ಗಂಗಾಧರಪ್ಪ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net