ಹಿಂದುಳಿದ ವರ್ಗದ ಅರ್ಹ ಫಲಾನುಭವಿಗಳ ಅಧ್ಯಯನ

1615106073353_1615106068999_mng-mar7-bunts1
Published on

ಮಂಗಳೂರು: ಹಿಂದುಳಿದ ವರ್ಗದ ಮೀಸಲಾತಿಯಡಿ ಸೌಲಭ್ಯ ಪಡೆಯಲು ಅರ್ಹತೆ ಹೊಂದಿರುವವರ ಬಗ್ಗೆ ಸಮಗ್ರ ಅಧ್ಯಯನ ನಡೆಸಲಾಗುತ್ತಿದೆ. ಅನೇಕ ಜನರಿಗೆ ತಮಗೆ ಇರುವ ಅವಕಾಶಗಳ ಬಗ್ಗೆಯೇ ಗೊತ್ತಿಲ್ಲ ಎಂದು ಹಿಂದುಳಿದ ವರ್ಗಗಳ ಆಯೋಗ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ ಹೇಳಿದರು.
ಬಂಟರ ಯಾನೆ ನಾಡವರ ಮಾತೃಸಂಘ ವತಿಯಿಂದ ನಗರದ ಶ್ರೀ ರಾಮಕೃಷ್ಣ ವಿದ್ಯಾಸಂಸ್ಥೆಗಳ ವಠಾರದಲ್ಲಿ ಭಾನುವಾರ ಆಯೋಜಿಸಿದ ಬಂಟ ಸಮಾಜದ ನೂತನ ಜನಪ್ರತಿನಿಧಿಗಳ ಅಭಿನಂದನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ತನ್ನದು ರಾಜಕೀಯೇತರ ಹುದ್ದೆಯಾಗಿದ್ದು, ಯಾವುದೇ ಸಂಘಸಂಸ್ಥೆಗಳು ಆಹ್ವಾನಿಸಿದರೆ ಹಿಂದುಳಿದ ವರ್ಗಗಳಿಗೆ ಸಿಗುವ ಅವಕಾಶಗಳಿಗೆ ಸಂಬಂಧಿಸಿದ ಯಾವುದೇ ಅಭಿಪ್ರಾಯಗಳನ್ನು ಹಂಚಿಕೊಳ್ಳಲು ಮತ್ತು ಯಾವುದೇ ಗೊಂದಲ ಇತ್ಯರ್ಥಪಡಿಸಿಕೊಳ್ಳಲು ಸಿದ್ದನಿರುವುದಾಗಿ ಹೇಳಿದರು.
ಮಾತೃಸಂಘದ ಅಧ್ಯಕ್ಷ ಮಾಲಾಡಿ ಅಜಿತ್ ಕುಮಾರ್ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಶಾಸಕಿ ಶಕುಂತಳಾವ ಶೆಟ್ಟಿ ಮುಖ್ಯ ಅತಿಥಿಯಾಗಿದ್ದರು.ಉಪಾಧ್ಯಕ್ಷ ಎ.ಹೇಮನಾಥ ಶೆಟ್ಟಿ ಕಾವು, ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ ಶೆಟ್ಟಿ, ಕೋಶಾಧಿಕಾರಿ ಕೃಷ್ಣಪ್ರಸಾದ್ ರೈ, ಜೊತೆ ಕಾರ್ಯದರ್ಶಿ ಸಂಜೀವ ಶೆಟ್ಟಿ, ಅಭಿನಂದನಾ ಸಮಿತಿ ಸಂಚಾಲಕರಾದ ಉಲ್ಲಾಸ್ ಆರ್.ಶೆಟ್ಟಿ ಮತ್ತು ದಿವಾಕರ ಸಾಮಾನಿ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net