ಹಿಂದುಳಿದ ವರ್ಗದವರಿಗೆ ಸ್ಥಾನಮಾನ ನೀಡಿ:ಜಗದೀಶ್ ಒತ್ತಾಯ

ಹಿಂದುಳಿದ ವರ್ಗದವರಿಗೆ ಸ್ಥಾನಮಾನ ನೀಡಿ:ಜಗದೀಶ್ ಒತ್ತಾಯ
Published on

ಹಾಸನ: ಜಿಲ್ಲೆಯಲ್ಲಿ 7 ಲಕ್ಷಕ್ಕೂ ಹೆಚ್ಚು ಹಿಂದುಳಿದ ಜನಾಂಗದ ಜನರಿದ್ದು ಆದಾಗ್ಯೂ ಹಿಂದುಳಿದ ವರ್ಗದ ಜನರನ್ನು ರಾಜಕೀಯವಾಗಿ ಕಡೆಗಣಿಸಲಾಗಿದೆ ಎಂದು ಅರಸೀಕೆರೆ ಸಂಗೊಳ್ಳಿ ರಾಯಣ್ಣ ಬ್ಯಾಂಕ್ ಅಧ್ಯಕ್ಷ ಜಗದೀಶ್ ಆರೋಪಿಸಿದರು.

ಈ ಹಿಂದಿನಿಂದಲೂ ಹಿಂದುಳಿದ ವರ್ಗದ ಜನರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿಕೊಂಡು ಬಂದಿದ್ದಾರೆ. ಆದರೆ ಕಾಂಗ್ರೆಸ್ ಸರ್ಕಾರ ಕೂಡ ಅಧಿಕಾರ ಹಂಚಿಕೆಯಲ್ಲಿ ತಾರತಮ್ಯ ಮಾಡಿದೆ ಎಂದು ಶುಕ್ರವಾರ ಸುದ್ದಿಗೋಷ್ಠಿ ಅಸಮಾಧಾನ ವ್ಯಕ್ತಪಡಿಸಿದರು.

ಹಾಸನ ಜಿಲ್ಲೆಯಲ್ಲಿ ಹಿಂದುಳಿದ ವರ್ಗದ ನಾಯಕರನ್ನು ಗುರುತಿಸಿ ನಿಗಮ ಮಂಡಳಿ ಅಧ್ಯಕ್ಷರು ಅಥವಾ ಇನ್ನಿತರ ಅಧಿಕಾರ ವಹಿಸಿದರೆ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಹಿಂದುಳಿದ ವರ್ಗ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲಕ್ಕೆ ನಿಲ್ಲಲಿದೆ. ಪಕ್ಷ ಆಂತರಿಕ ಸಮೀಕ್ಷೆಯ ಮೂಲಕ ಮಾಹಿತಿ ಪಡೆದು ಜಿಲ್ಲೆಯಲ್ಲಿ ಪಕ್ಷ ಸಂಘಟನೆ ಮಾಡಿದ್ದ ನಾಯಕರನ್ನು ಗುರುತಿಸಿ ಅವರಿಗೆ ಸ್ಥಾನಮಾನ ನೀಡಿದರೆ ಅನುಕೂಲ ಆಗಲಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ನಾಯಕರಾದ ಸರ್ದಾರ್ ಪಾಷಾ, ಗಂಗಾಧರ್ ನಾಯಕ್, ಮಲ್ಲೇಶ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net