ಹಿಂದುಳಿದವರಿಗೆ ಸಾಮಾಜಿಕ ನ್ಯಾಯ ಒದಗಿಸಿಕೊಟ್ಟ ಧೀಮಂತ ನಾಯಕ ದೇವರಾಜ ಅರಸು : ಸಂಸದ ಡಾ.ಉಮೇಶ ಜಾಧವ ಬಣ್ಣನೆ

IMG-20230820-WA0017
Published on


ಕಲಬುರಗಿ:.ಡಿ.ದೇವರಾಜ ಅರಸು ಅವರು ತುಳಿತಕ್ಕೊಳಗಾದ ಹಿಂದುಳಿದ ವರ್ಗದ ಸಮುದಾಯದ ಜನರನ್ನು  ಮೇಲೆತ್ತಿ    ಸಮಾಜದ ಮುಖ್ಯವಾಹಿನಿಗೆ ತಂದು ಸಾಮಾಜಿಕ ಸಮಾನತೆ ಎತ್ತಿ  ಹಿಡಿದ  ಮಹಾನ ನಾಯಕರಾಗಿದ್ದಾರೆ ಎಂದು ಲೋಕಸಭಾ ಸದಸ್ಯ ಡಾ. ಉಮೇಶ ಜಾಧವ ಅವರು ಅಭಿಮತ ವ್ಯಕ್ತಪಡಿಸಿದರು.
ಭಾನುವಾರ ಇಲ್ಲಿನ ಡಾ. ಎಸ್.ಎಂ. ಪಂಡಿತ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ದಿ. ಡಿ.ದೇವರಾಜ ಅರಸು ಹಿಂದುಳದ ವರ್ಗಗಳ ಅಭಿವೃದ್ದಿ ನಿಗಮ, ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ಹಾಗೂ ರಾಜ್ಯ ಹಿಂದುಳಿದ ವರ್ಗಗಳ ಜಾಗೃತಿ ವೇದಿಕೆ  ಇವರುಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ ಮಾಜಿ ಮುಖ್ಯಮಂತ್ರಿ. ದಿ. ಡಿ.ದೇವರಾಜ್ ಅರಸು ಅವರು ೧೦೮ ನೇ ಜನ್ಮ ದಿನಾಚರಣೆ ಕಾರ್ಯಕ್ರಮ ಉದ್ಫಾಟಿಸಿ ಮಾತನಾಡಿದರು.
 ದಿ.ಡಿ.ದೇವರಾಜ ಅರಸು ಅವರು ಉಳುವವನೇ ಒಡೆಯ ಎಂಬ ಕಾನೂನು ಜಾರಿಗೆ ತುರವ ಮೂಲಕ ದುರ್ಬಲದ  ಬಾಳಿಗೆ ಬೆಳಕಾಗಿದ್ದರು. ಹೀಗಾಗಿ ನಾವೆಲ್ಲರೂ ಅರಸು ಅವರ ಆದರ್ಶ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ ಮಾತನಾಡಿ, ಹಿಂದುಳಿದ ವರ್ಗಗಳ ಕಲ್ಯಾಣಕ್ಕಾಗಿ  ಅರಸು ಅವರು ಶ್ರಮಪಟ್ಟಿದ್ದಾರೆ. ದೇವರಾಜ ಅರಸು ಅವರು ಬಸವಣ್ಣವರ ಸರ್ವರಿಗೆ ಸಮಬಾಳು ಸಮಪಾಲು ತತ್ವದಡಿಯಲ್ಲಿ ಸುಮಾರು ೮ ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದರು. ದೀನ ದುರ್ಬಲರ ಏಳಿಗಾಗಿ ಸಕಷ್ಟು ಯೋಜನೆಗಳು ಜಾರಿಗೆ ತರುವ ಮೂಲಕ ಹಿಂದುಳಿದ ವರ್ಗಗಳ ಕಲ್ಯಾಣಕ್ಕಾಗಿ ಶ್ರಮಿಸಿದರು.
ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ಜಿಲ್ಲಾ ಅಧ್ಯಕ್ಷ ಮಹಾಂತೇಶ ಎಸ್. ಕೌಲಗಿ ಮಾತನಾಡಿದರು..
ದಕ್ಷಿಣ ಮತ ಕ್ಷೇತ್ರದ ಶಾಸಕರಾದ ಅಲ್ಲಮiಪ್ರಭು ಪಾಟೀಲ ಅಧ್ಯಕ್ಷತೆ ವಹಿಸಿ ಮಾತನಾಡಿ, ಹಿಂದುಳಿದ ವರ್ಗಗಳ  ಜನರಿಗಾಗಿ ದೇವರಾಜ ಅರಸು  ಅನೇಕ ಕೂಡಿಗೆಗಳನ್ನು ನೀಡಿದ್ದಾರೆ ಎಂದರು.
ಇದೇ ವೇಳೆ ೨೦೨೨-೨೩ನನೇ ಸಾಲಿನಲ್ಲಿ ವಸತಿ ಶಾಲೆ ಹಾಗೂ ವಸತಿ ನಿಲಯದ ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ. ಪಿಯುಸಿ, ದ್ವಿತೀಯ, ಪದವಿ ಹಾಗೂ ಸ್ನಾತಕೋತ್ತರ ಪದವಿ ವಾರ್ಷಿಕ ಪದವಿ ವಾರ್ಷಿಕ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕಪಡೆದ ವಿದ್ಯಾರ್ಥಿಗಳನ್ನು ಸನ್ಮಾನ ಮಾಡಲಾಯಿತು.
ಡಾ. ದೇವರಾಜ ಅರಸು ಅವರ ಜೀವನ ಸಾಧನೆ ಕುರಿತು ಸರ್ಕಾರಿ ಮಹಿಳಾ ಪ್ರಥಮ ದರ್ಜೇ ಕಾಲೇಜಿನ ಸಹ ಪ್ರಾದ್ಯಾಪಕ ಡಾ,. ಪದ್ಮರಾಜ ರಾಸಣಗಿ ವಿಶೇಷ ಉಪನ್ಯಾಸ ನೀಡಿ ಅವರು ಬದುಕಿನ ಹಲವು ಅವಿಸ್ಮರಣೆ ಘಟನೆಗಳನ್ನು ಸ್ಮರಿಸಿದರು.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾಧಿಕಾರಿ ಸದಾಶಿವ ಮ.ನಾರಾಯಣಕರ ಅವರ ಸ್ವಾಗತಿಸಿದರು.
ಇದಕ್ಕೂ ಮುನ್ನ ನಗರದ ಸರ್ದಾರ ವಲ್ಲಭಬಾಯಿ ಪಟೇಲ್ ವೃತ್ತದಿದ ರಂಗಮಂದಿರದವರೆಗೆ ಅರಸು ಭಾವಚಿತ್ರಕ್ಕೆ ಹಾಗೂ ಕಲಾ ತಂಡಗಳಿಂದ ಭವ್ಯ ಮೆರವಣಿಗೆ ನಡೆಯಿತು. ಮೂರಾರ್ಜಿ ದೇಸಾಯಿ ವಸತಿ ಶಾಲೆಯ ಮಕ್ಕಳಿಂದ ನಾಟಕವನ್ನು ಪ್ರದರ್ಶಿಸಿದರು.
ವೇದಿಕೆ ಮೇಲೆ ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಲಕ್ಷ್ಮಣ ಶ್ರೀಗೇರಿ, ಗೇಡ್ -೧ ತಹಶೀಲ್ದಾರ ನಾಗಮ್ಮ,, ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ಜಿಲ್ಲಾಧ್ಯಕ್ಷ ನಾರಾಯಣರಾವ ಎಸ್ ಸುರವಸೆ, ಬಸವರಾಜ ಬೂದಿಹಾಳ ಸವಿತಾ ಸಮಾಜದ ಸಮಾಜ ಸೇವಾಕ ಅಶೋಕ ಡೈಮಂಡ್,ವಸತಿ ಶಾಲೆಯ ಮಕ್ಕಳು ನಗರದ ಗಣ್ಯ ವ್ಯಕ್ತಿಗಳು ವೇದಿಕೆಯಲ್ಲಿದ್ದರು  ವಿವಿಧ ಸಮುದಾಯದ ಮುಖಂಡರು ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net