ಹಿಂಸೆ ಪ್ರಚೋದಕರ ವಿರುದ್ಧ ಕ್ರಮಕೈಗೊಳ್ಳಿ

sri manavi
ಶೃಂಗೇರಿ ತಾಲೂಕು ಕಚೇರಿಯಲ್ಲಿ ತಹಸೀಲ್ದಾರ್ ಗೌರಮ್ಮಗೆ ಗೌರಿ ಸ್ಮಾರಕ ಟ್ರಸ್ಟ್‌ನಿಂದ ಮನವಿ ಸಲ್ಲಿಸಲಾಯಿತು. ಭಾಗ್ಯಾ ಹಾಗಲಗಂಚಿ, ಕಲ್ಕುಳಿ ವಿಠ್ಠಲ ಹೆಗ್ಡೆ, ಶಂಕರ, ನಾಗೇಶ್ ಇತರರಿದ್ದರು.
Published on

ಶೃಂಗೇರಿ: ಗೌರಿ ಲಂಕೇಶ್ ಹಂತಕರಿಗೆ ಸನ್ಮಾನ ಮಾಡಿರುವವರ ವಿರುದ್ಧ ಕೇಸ್ ದಾಖಲಿಸಬೇಕು ಎಂದು ಗೌರಿ ಬಳಗ ಮತ್ತು ಗೌರಿ ಸ್ಮಾರಕ ಟ್ರಸ್ಟ್‌ನ ಪದಾಧಿಕಾರಿ ಭಾಗ್ಯಾ ಹಾಗಲಗಂಚಿ ಒತ್ತಾಯಿಸಿದರು.

ಗೌರಿ ಲಂಕೇಶ್ ಹಂತಕರನ್ನು ಬಂಧಿಸುವಂತೆ ಒತ್ತಾಯಿಸಿ ತಾಲೂಕು ಕಚೇರಿ ಎದುರು ಗೌರಿ ಬಳಗ ಮತ್ತು ಗೌರಿ ಸ್ಮಾರಕ ಟ್ರಸ್ಟ್‌ನಿಂದ ಮಂಗಳವಾರ ನಡೆಸಿದ ಧರಣಿಯಲ್ಲಿ ಮಾತನಾಡಿ, ಹಿಂಸೆ ಮತ್ತು ದ್ವೇಷಕ್ಕೆ ಪ್ರಚೋದನೆ ನೀಡುತ್ತಿರುವ ಕೋಮುವಾದಿ ಸಂಘಟನೆಗಳ ವಿರುದ್ಧ ಕ್ರಮ ಜರುಗಿಸಬೇಕು. ಗೌರಿ ಕೊಲೆ ವಿಚಾರಣೆಯನ್ನು ತ್ವರಿತಗೊಳಿಸಿ ಹಂತಕರಿಗೆ ಶಿಕ್ಷೆಯಾಗುವಂತೆ ಮಾಡಬೇಕು. ಕೊಲೆಗಾರರಿಗೆ ಮಾಡಿರುವ ಸನ್ಮಾನ ಕೊಲೆಗೆ ನೀಡಿರುವ ಪ್ರಚೋದನೆಯಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ತಹಸೀಲ್ದಾರ್ ಗೌರಮ್ಮ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಸಾಹಿತಿ ಕಲ್ಕುಳಿ ವಿಠ್ಠಲ್ ಹೆಗ್ಡೆ, ಪಪಂ ಸದಸ್ಯ ರಫೀಕ್ ಅಹಮದ್, ರಾಧಾ ಹಾಗಲಗಂಚಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net