ಹಿಟ್ ಅಂಡ್ ರನ್‌ಗೆ ಯುವಕ ಬಲಿ

Published on

ಚಾಮರಾಜನಗರ: ತಾಲೂಕಿನ ಕಾಳನಹುಂಡಿ ಸಮೀಪದ ಮೇವಿನ ಬಿಲ್ಲೆ ಘಟಕದ ಬಳಿ ಬುಧವಾರ ತಡರಾತ್ರಿ ಸಂಭವಿಸಿದ ಹಿಟ್ ಅಂಡ್ ರನ್‌ಗೆ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ತಾಲೂಕಿನ ಕಾಳನಹುಂಡಿ ಗ್ರಾಮದ ಮಧು (30) ಮೃತ ದುರ್ದೈವಿ. ಈತ ಚಾಮರಾಜನಗರದಿಂದ ಸ್ವಗ್ರಾಮಕ್ಕೆ ಬರುತ್ತಿರುವಾಗ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದುಕೊಂಡು ಹೋಗಿರುವ ಪರಿಣಾಮ ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ವಿಷಯ ತಿಳಿದ ಕೂಡಲೇ ಗ್ರಾಮಾಂತರ ಠಾಣೆಯ ಇನ್ಸ್ಪೆಕ್ಟರ್ ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಶವವನ್ನು ಸಿಮ್ಸ್ ಆಸ್ಪತ್ರೆಗೆ ರವಾನಿಸಿದರು. ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net