ಹಿರಿಯ ನಾಗರಿಕ ದಿನದಂದು ಪ್ರತಿಭಟನೆ:ಗೋಪಾಲ್

ಹಿರಿಯ ನಾಗರಿಕ ದಿನದಂದು ಪ್ರತಿಭಟನೆ:ಗೋಪಾಲ್
Published on

ಹಾಸನ:ಕಳೆದ 25 ತಿಂಗಳಿನಿಂದ ಈಚೆಗೆ ನಿವೃತ್ತಿಯಾಗಿರುವಂತಹ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಅ.1ರಂದು ನಡೆಯುವ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಕರ್ನಾಟಕ ನಿವೃತ್ತ ನೌಕರರ ವೇದಿಕೆಯ ಜಿಲ್ಲಾ ಪ್ರಧಾನ ಸಂಚಾಲಕ ಗೋಪಾಲ್ ತಿಳಿಸಿದರು.
ಕಳೆದ 2022 ಜುಲೈ ಒಂದರಿಂದ 2024 ಜುಲೈ 31ರ ಅವಧಿಯಲ್ಲಿ ನಿವೃತ್ತಿಯಾಗಿರುವಂತಹ ನೌಕರರಿಗೆ ಏಳನೇ ವೇತನ ಆಯೋಗದ ಲೆಕ್ಕಾಚಾರದ ಅನುಸಾರ ನಿವೃತ್ತಿಯ ಆರ್ಥಿಕ ಸೌಲಭ್ಯವನ್ನು ಒದಗಿಸಬೇಕು ಈ ಬಗ್ಗೆ ಸಾಕಷ್ಟು ಹೋರಾಟ ಮತ್ತು ಮನವಿ ಮಾಡಿದರು ಕೂಡ ಇದುವರೆಗೂ ಕ್ರಮ ಕೈಗೊಂಡಿಲ್ಲ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು.
ಕಳೆದ 25 ತಿಂಗಳಿನಲ್ಲಿ ನಿವೃತ್ತಿ ಆಗಿರುವಂತಹ ನಮಗೆ ಸಾಕಷ್ಟು ಅನ್ಯಾಯವಾಗುತ್ತಿದೆ. ಆದ್ದರಿಂದ ತಕ್ಷಣವೇ ಸರ್ಕಾರ ಇದರ ಬಗ್ಗೆ ಕ್ರಮ ಕೈಗೊಳ್ಳಬೇಕು. ಈಗಾಗಲೇ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಬೃಹತ್ ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ಒತ್ತಾಯಿಸಿದ್ದೆವು. ಆದರೆ ಸರ್ಕಾರ ಇದನ್ನು ಜಾರಿ ಮಾಡಲು ಸಂಪೂರ್ಣವಾಗಿ ವಿಫಲವಾಗಿತ್ತಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಅಕ್ಟೋಬರ್ ಒಂದರಂದು ಕಪ್ಪುಪಟ್ಟಿ ಧರಿಸುವ ಮೂಲಕ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ನೌಕರ ಸಂಘದ ಅಧ್ಯಕ್ಷ ಈ. ಕೃಷ್ಣೇಗೌಡ ಕರ್ನಾಟಕ ನಿವೃತ್ತ ನೌಕರರ ವೇದಿಕೆಯ ಮುಖಂಡರಾದ ಬೋರೇಗೌಡ, ಪುಟ್ಟಸ್ವಾಮಿ, ಬಾಲಲೋಚನ, ಕಾಂತರಾಜ್ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net