

ಚಿತ್ರದುರ್ಗ: ಅಂಗವಿಕಲರು ಹಾಗೂ 85 ವಯಸ್ಸು ಮೀರಿದ ಹಿರಿಯ ನಾಗರಿಕರಿಗೆ ಮನೆಯಿಂದಲೇ ಮತ ಚಲಾಯಿಸುವ ಹಕ್ಕು ನೀಡಲಾಗಿದೆ. ಇದರೊಂದಿಗೆ ಮತಗಟ್ಟೆ ಕೇಂದ್ರಗಳಲ್ಲಿ ಇವರ ಮತದಾನಕ್ಕಾಗಿ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗಿದೆ ಎಂದು ಜಿಲ್ಲಾ ಸ್ವೀಪ್ ಸಮಿತಿಯ ಅಧ್ಯಕ್ಷ ಎಸ್.ಜೆ.ಸೋಮಶೇಖರ್ ಹೇಳಿದರು.
ನಗರದ ಸಿ.ಕೆ.ಪುರ ಬಡಾವಣೆ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ಸೋಮವಾರ ಸಂಜೆ ಆಯೋಜಿಸಿದ್ದ ಹಿರಿಯ ನಾಗರಿಕರ ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಉದ್ಘಾಟಿಸಿ ಮಾತನಾಡಿ, ಏ.26ರಂದು ಮತದಾನದಲ್ಲಿ ಎಲ್ಲರು ಪಾಲ್ಗೊಂಡು ತಮ್ಮ ಹಕ್ಕು ಚಲಾಯಿಸಬೇಕು ಎಂದರು.
ಈ ವೇಳೆ ಪ್ರತಿಜ್ಞಾವಿಧಿ ಭೋದಿಸಿದರು. ಜಿಪಂ ಉಪ ಕಾರ್ಯದರ್ಶಿ ಕೆ.ತಿಮಪ್ಪ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಡಿಡಿ ಭಾರತಿಆರ್.ಬಣಕಾರ್, ನಗರಸಭೆ ಆಯುಕ್ತೆ ಎಂ.ರೇಣುಕಾ, ಜಿಲ್ಲಾ ಸ್ವೀಪ್ ಸಮಿತಿ ಸಂಯೋಜಕಿ ಸುಷ್ಮಾರಾಣಿ, ಈಶ್ವರೀಯ ವಿಶ್ವವಿದ್ಯಾಲಯದ ರಶ್ಮಿ ಇತರರಿದ್ದರು.