

ಗದಗ: ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತಿ, ಅಂಗವಿಕಲ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಮತ್ತು ಜಿಲ್ಲೆಯಲ್ಲಿಯ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಂಘ ಸಂಸ್ಥೆಗಳ ಆಶ್ರಯದಲ್ಲಿ ವಿಶ್ವ ಹಿರಿಯ ನಾಗರಿಕರ ದಿನ ನಿಮಿತ್ತ ಜಿಲ್ಲಾ ಮಟ್ಟದಲ್ಲಿ ಹಿರಿಯ ನಾಗರಿಕರ ಕ್ರೀಡಾ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ. ಗುರುಪ್ರಸಾದ, ಹಿರಿಯ ನಾಗರಿಕರು ಇಂತಹ ಕ್ರೀಡೆಗಳಲ್ಲಿ ಭಾಗವಹಿಸುತ್ತಿರುವುದು ಸಂತಸದ ಸಂಗತಿ ಎಂದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಪರಶುರಾಮ ಶೆಟ್ಟಪ್ಪನವರ ಅಧ್ಯಕ್ಷತೆ ವಹಿಸಿದ್ದರು.
ಜಿಲ್ಲಾ ನಿವೃತ್ತ ನೌಕರರ ಸಂಘದ ಅಧ್ಯಕ್ಷ ಕೆ.ಎಚ್. ಬೇಲೂರ, ಬಿ.ಬಿ. ಹೂಗಾರ, ಬಿ.ಎಂ. ಬಿಳೆಯಲಿ, ಜಿ.ಎಸ್. ಹಿರೇಮಠ, ಮಲ್ಲಿಕಾರ್ಜುನ ಖಂಡಮ್ಮನವರು ಇದ್ದರು. ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಮಹಾಂತೇಶ ಕೆ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ವಾಗ್ದೇವಿ ಕುಲಕರ್ಣಿ ಪ್ರಾರ್ಥಿಸಿದರು. ಪ್ರಕಾಶ ಗಾಣಿಗೇರ ನಿರೂಪಿಸಿದರು. ವಿಶ್ವ ಅಂಗವಿಕಲರ ದಿನಾಚರಣೆಯ ಅಂಗವಾಗಿ ಹಿರಿಯ ನಾಗರಿಕರಿಗಾಗಿ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.