ಹಿರಿಯ ಪತ್ರಕರ್ತ ಮುರಳಿ ನಿಧನಕ್ಕೆ ಶ್ರದ್ಧಾಂಜಲಿ

IMG-20240612-WA0115
ಅನಾರೋಗ್ಯದಿಂದ ನಿಧನರಾದ ಹಿರಿಯ ಪತ್ರಕರ್ತ ಮುರಳಿ ಅವರಿಗೆ ಆಲೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಕಚೇರಿಯಲ್ಲಿ ಬುಧವಾರ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಪೃ್ವ ಜಯರಾಂ, ಪ್ರದೀಪ್, ನವೀನ್, ರುದ್ರಕುಮಾರ್, ನಟರಾಜ್ ನಾಕಲಗೂಡು ಇತರರಿದ್ದರು.
Published on

ಆಲೂರು: ಅನಾರೋಗ್ಯದಿಂದ ನಿಧನರಾದ ಹಿರಿಯ ಪತ್ರಕರ್ತ ಮುರಳಿ ಅವರಿಗೆ ಆಲೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದಿಂದ ಬುಧವಾರ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪೃಥ್ವಿ ಜಯರಾಂ ಮಾತನಾಡಿ, ಹಿರಿಯ ಪತ್ರಕರ್ತರಾಗಿದ್ದ ಮರಳಿ ಅವರು ಜಿಲ್ಲಾ ಪತ್ರಕರ್ತರ ಸಂಘದಲ್ಲಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು. ಅವರ ಅಕಾಲಿಕ ನಿಧನದಿಂದಾಗಿ ಸಂಘಕ್ಕೆ ತುಂಬಲಾರದ ನಷ್ಟವಾಗಿದೆ. ಭಗವಂತ ಅವರ ಕುಟುಂಬಕ್ಕೆ ದುಃಖ ನಿಗಿಸೊ ಶಕ್ತಿಕೊಡಲಿ ಎಂದರು.

ಶ್ರದ್ಧಾಂಜಲಿ ಸಭೆಯಲ್ಲಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಆದಿಲ್ ಪಾಷ, ಉಪಾಧ್ಯಕ್ಷ ಪ್ರದೀಪ್, ಖಜಾಂಚಿ ನವೀನ್, ಕಾರ್ಯದರ್ಶಿ ರುದ್ರಕುಮಾರ್, ಸದಸ್ಯ ವಿಶ್ವನಾಥ್, ಹಿರಿಯ ಪತ್ರಕರ್ತ ನಟರಾಜ್ ನಾಕಲಗೂಡು, ಕಬೀರ್ ಸೇರಿದಂತೆ ಇತರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net