ಹಿರಿಯರ ಜೀವನಾನುಭವ ಯುವಜನತೆಗೆ ಆದರ್ಶಪ್ರಾಯ

Published on

ಹೊಸಪೇಟೆ: ಹಿರಿಯ ನಾಗರಿಕರ ಶಿಸ್ತಿನ ಜೀವನ ಶೈಲಿ ಮತ್ತು ಜೀವನಾನುಭವ ಯುವಜನತೆಗೆ ಆದರ್ಶಪ್ರಾಯವಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣಪ್ಪ ಹೇಳಿದರು.

ವಿಶ್ವ ಹಿರಿಯ ನಾಗರಿಕ ದಿನಾಚರಣೆ ನಿಮಿತ್ತ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಶನಿವಾರ ಹಿರಿಯ ನಾಗರಿಕರಿಗೆ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಭವಿಷ್ಯದ ಬದುಕಿಗೆ ಬುನಾದಿ ಹಾಕಿಕೊಟ್ಟಿರುವ ಮನೆಯ ಯಜಮಾನ, ವಯೋವೃದ್ಧರು ಕಾಳಜಿಗೆ ಸರ್ಕಾರವು ಅನೇಕ ಯೋಜನೆಗಳನ್ನು ನೀಡಲಾಗಿದೆ. ಹಿರಿಯ ನಾಗರಿಕರಿಗೆ ಸಾಮಾಜಿಕ ಭದ್ರತೆ, ಆರ್ಥಿಕ ಭದ್ರತೆ ಹಾಗೂ ಉತ್ತಮ ವಾತಾವರಣ ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರ ಪ್ರತಿವರ್ಷ ಹಿರಿಯ ನಾಗರಿಕರ ದಿನವನ್ನು ಆಚರಿಸುತ್ತಿದೆ. ಹಿರಿಯ ನಾಗರಿಕರು ಕ್ರೀಡಾಕೂಟದಲ್ಲಿ ಭಾಗವಹಿಸುವುದರಿಂದ ಜೀವನೋತ್ಸಾಹ ಹೆಚ್ಚುತ್ತದೆ. ಆದ್ದರಿಂದ ವಯಸ್ಸು ಕೇವಲ ದೇಹಕ್ಕೆ ಹೊರತು ಮನಸ್ಸಿಗಲ್ಲ ಎಂಬ ಚಿಂತನೆಯೊAದಿಗೆ ಪ್ರತಿಯೊಬ್ಬ ಹಿರಿಯ ನಾಗರಿಕರು ಕ್ರಿಯಾಶೀಲರಾಗಿ ಕ್ರೀಡೆಗಳಲ್ಲಿ ಭಾಗವಹಿಸಬೇಕು ಎಂದರು.

ಹುಡಾ ಅಧ್ಯಕ್ಷ ಎಚ್.ಎನ್.ಎಫ್.ಇಮಾಮ್ ನಿಯಾಜಿ ಮಾತನಾಡಿ, ಪ್ರತಿಯೊಬ್ಬ ಹಿರಿಯ ನಾಗರಿಕರು ಕ್ರೀಡೆಗಳಲ್ಲಿ ಹೆಚ್ಚು ಭಾಗವಹಿಸುವುದರಿಂದ ಉತ್ತಮ ಆರೋಗ್ಯವನ್ನು ಪಡೆಯಬಹುದಾಗಿದೆ. ಹಿರಿಯ ನಾಗರಿಕರನ್ನು ಪ್ರತಿಯೊಬ್ಬರು ಸಹ ಗೌರವದಿಂದ ಕಾಣಬೇಕು ಮತ್ತು ಸಮಾಜದ ಏಳಿಗೆಗೆ ಅವರ ಉತ್ತಮ ಅನುಭವವನ್ನು ಬಳಸಿಕೊಳ್ಳಬೇಕು ಎಂದರು.

ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ರಾಮಾಂಜಿನೇಯ, ಜಿಲ್ಲಾ ದೈಹಿಕ ಶಿಕ್ಷಣ ಅಧಿಕಾರಿ ಶ್ರೀಕಾಂತ್ ವಾಲ್ಮೀಕಿ, ನಿವೃತ್ತ ಪೊಲೀಸ್ ಕುಮಾರಸ್ವಾಮಿ, ನಿವೃತ್ತ ನೌಕರರ ಸಂಘದ ಅಧ್ಯಕ್ಷ ಎಸ್.ಬಿ.ಶೇಖರಗೌಡ ಪಾಟೀಲ್, ಪ್ರಮುಖರಾದ ಎಚ್.ಡಿ.ಜಗ್ಗೀನ್, ಗಂಗಮ್ಮ, ಎಸ್.ಭೀಮಪ್ಪ, ಜೆ.ರವಿಕುಮಾರ್, ಆರ್.ಧನರಾಜ್ ಇತರರಿದ್ದರು

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net