ವಿವಿ ಸಾಗರಕ್ಕೆ ಭದ್ರಾ ನೀರು ಹರಿಸಲು ಒತ್ತಾಯ; ಹಿರಿಯೂರಲ್ಲಿ ಪ್ರತಿಭಟನೆ

Hiriyur, Vanivilasa Sagar, protest,
Published on

ಹಿರಿಯೂರು: ವಾಣಿ ವಿಲಾಸ ಸಾಗರಕ್ಕೆ ಭದ್ರಾ ಜಲಾಶಯದ ನೀರು ಹರಿಸುವಂತೆ ಒತ್ತಾಯಿಸಿ ರೈತ ಸಂಘದ ನೇತೃತ್ವದಲ್ಲಿ ನೂರಾರು ರೈತರು ಪ್ರತಿಭಟನೆ ನಡೆಸಿ, ತಹಸೀಲ್ದಾರ್ ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಿದರು.

ಜುಲೈ 15ರಿಂದ ಅ.15ರವರೆಗೆ ವಿವಿ ಸಾಗರಕ್ಕೆ ನೀರು ಹರಿಸುವಂತೆ ಸರ್ಕಾರ ಆದೇಶಿಸಿದ್ದರೂ ಅಧಿಕಾರಿಗಳು ವಿಳಂಬ ಮಾಡುತ್ತಿದ್ದಾರೆ. ಭದ್ರಾ ಜಲಾಶಯ ಭರ್ತಿಯಾಗಿ ಸಾವಿರಾರು ಕ್ಯುಸೆಕ್ ನೀರು ವ್ಯರ್ಥವಾಗಿ ತುಂಗಭದ್ರಾ ನದಿ ಮೂಲಕ ಸಮುದ್ರ ಸೇರುತ್ತಿದೆ. 1933ರಲ್ಲಿ ವಿವಿ ಸಾಗರ ಜಲಾಶಯದ ಕೋಡಿ ಬಿದ್ದಿದ್ದು ಬಿಟ್ಟರೆ ಈವರೆಗೆ ಭರ್ತಿಯಾಗಿಲ್ಲ.

ಪ್ರಸಕ್ತ ವರ್ಷ ವರುಣ ಕೃಪೆಯಿಂದ ಜಲಾಶಯಕ್ಕೆ ಸ್ವಲ್ಪ ಪ್ರಮಾಣದ ನೀರು ಹರಿದಿದೆ. ವಿವಿ ಸಾಗರಕ್ಕೆ ಮೀಸಲಿಟ್ಟಿರುವ ನೀರನ್ನು ನಿಗದಿತ ಅವಧಿಯಲ್ಲಿ ಹರಿಸಬೇಕು. ಈ ಬಗ್ಗೆ ಸರ್ಕಾರ ಕ್ರಮ ಕೈಗೊಳ್ಳಬೇಕು. ಇಲ್ಲಿದಿದ್ದರೆ ರಾಷ್ಟ್ರೀಯ ಹೆದ್ದಾರಿ ಬಂದ್ ಮೂಲಕ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net