

ಚಿಕ್ಕಮಗಳೂರು: ನಗರದ ಹೊರವಲಯದ ಹಿರೇಮಗಳೂರಿನಲ್ಲಿ ಮುಖಕ್ಕೆ ಬಟ್ಟೆ ಸುತ್ತಿಕೊಂಡು ಬಂದ ಇಬ್ಬರೂ ಕಳ್ಳರು ರಾಮಮ್ಮ ಎಂಬುವರ ಮನೆಗೆ ನುಗ್ಗಿ ೩೫ ಸಾವಿರ ರೂ. ನಗದು ಹಾಗೂ ಬೆಳ್ಳಿ ಆಭರಣಗಳನ್ನು ಕದ್ದೊಯ್ದಿರುವ ಘಟನೆ ನಡೆದಿದೆ.
ಮನೆಯಲ್ಲಿ ಯಾರೂ ಇಲ್ಲದಿರುವುದನ್ನು ಗಮನಿಸಿದ ಇಬ್ಬರು ಕಳ್ಳರು ಮುಖಕ್ಕೆ ಬಟ್ಟೆ ಸುತ್ತಿಕೊಂಡು ಮನೆಯೊಳಗೆ ನುಗ್ಗಿ ಕಳ್ಳತನ ಮಾಡಿದ್ದಾರೆ. ಕಳ್ಳರು ಮುಖಕ್ಕೆ ಬಟ್ಟೆ ಸುತ್ತಿಕೊಂಡು ಮನೆಯೊಳಗೆ ನುಗ್ಗುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಮುಖಕ್ಕೆ ಬಟ್ಟೆ ಸುತ್ತಿಕೊಂಡ ಕಳ್ಳರು ಗಮನಿಸಿ ಅವುಗಳನ್ನು ಒಡೆದು ಹಾಕಿದ್ದಾರೆ. ಬಳಿಕ ಮನೆಯೊಳಗೆ ನುಗ್ಗಿ ಮನೆಯ ಒಳಗಿನ ಸಿಸಿ ಕ್ಯಾಮೆರಾಗೂ ಹಾನಿ ಮಾಡಿ ಕಳ್ಳತನ ಮಾಡಿದ್ದಾರೆ. ಈ ಸಂಬAಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಕಳ್ಳರ ಪತ್ತೆಗೆ ಕ್ರಮ ಕೈಗೊಂಡಿದ್ದಾರೆ.