ಹಿರೇಮಸಳಿ ಸಾಹಿತಿಯ ಹಿರಿಮೆ, ರಾಜ್ಯಮಟ್ಟದ ಪ್ರಶಸ್ತಿಗೆ ಭಾಜನ, ಕಲ್ಲು ಹೂವಿನ ನೆರಳು ಕಥಾ ಸಂಕಲನಕ್ಕೆ ಪ್ರಶಸ್ತಿ

IMG-20220218-WA0106
Published on

ವಿಜಯಪುರ: ಇಂಡಿ ತಾಲೂಕಿನ ಹಿರೇಮಸಳಿ ಗ್ರಾಮದ ಯುವ ಸಾಹಿತಿ ಅನೀಲ ಗುನ್ನಾಪುರ ಇವರ ‘ಕಲ್ಲು ಹೂವಿನ ನೆರಳು’ ಕಥಾ ಸಂಕಲನ ರಾಜ್ಯ ಪ್ರಶಸ್ತಿಗೆ ಭಾಜನವಾಗಿದೆ.

ರಾಯಚೂರು ಜಿಲ್ಲೆ ಮಾನ್ವಿ ಪಟ್ಟಣದ ಪ್ರಾರ್ಥನಾ ಟ್ರಸ್ಟ್ ವತಿಯಿಂದ ಕೊಡಮಾಡುವ ರಾಜ್ಯ ಮಟ್ಟದ ಪ್ರಾರ್ಥನಾ ಸಾಹಿತ್ಯ ಪುರಸ್ಕಾರಕ್ಕೆ ‘ಕಲ್ಲು ಹೂವಿನ ನೆರಳು’ ಭಾಜನವಾಗಿದೆ.

ಶುಕ್ರವಾರ ನಡೆದ ಸ್ಪರ್ಧೆಯಲ್ಲಿ ಈ ರಾಜ್ಯಮಟ್ಟದ ಪ್ರಶಸ್ತಿ ನೀಡಲಾಗಿದೆ. ಪ್ರಶಸ್ತಿಯು 5 ಸಾವಿರ ರೂ.ನಗದು ಹಾಗೂ ಪ್ರಶಸ್ತಿ ಪತ್ರ ಒಳಗೊಂಡಿದೆ

ನಾಡಿನ ಹಿರಿಯ ಕಥೆಗಾರರಾದ ಡಾ.ಅಮರೇಶ ನುಗಡೋಣಿ ಹಾಗೂ ಕವಿಯಿತ್ರಿ ಲಲಿತಾ ಸಿದ್ಧಬಸವಯ್ಯ ತೀರ್ಪುಗಾರರಾಗಿ ಭಾಗವಹಿಸಿದ್ದರು ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net