ಹುಂಡಿ ಹಣ ಕದ್ದೊಯ್ದ ಖದೀಮರು

Published on

ಹನೂರು: ಅಜ್ಜೀಪುರ ಸಮೀಪದ ಶ್ರೀ ಆಂಜನೇಯ ಸ್ವಾಮಿ ದೇಗುಲದಲ್ಲಿ ಕಳ್ಳರು ಸೋಮವಾರ ರಾತ್ರಿ ಹುಂಡಿ ಹಣವನ್ನು ಕದ್ದೊಯ್ದಿದ್ದಾರೆ.

ದೇಗುಲದ ಬಾಗಿಲ ಬೀಗವನ್ನು ಮುರಿದು ಒಳನುಗ್ಗಿರುವ ಕಳ್ಳರು ಹುಂಡಿಯಲ್ಲಿದ್ದ ಹಣವನ್ನು ಕದ್ದು ಪರಾರಿಯಾಗಿದ್ದಾರೆ. ಸುದ್ದಿ ತಿಳಿದು ಮಂಗಳವಾರ ಇನ್‌ಸ್ಪೆಕ್ಟರ್ ಚಿಕ್ಕರಾಜಶೆಟ್ಟಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಮುಂದಿನ ಕ್ರಮಕೈಗೊಂಡಿದ್ದಾರೆ. ರಾಮಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕೆಂಪಯ್ಯಹಟ್ಟಿ ಗ್ರಾಮದಲ್ಲಿ ಇತ್ತೀಚೆಗಷ್ಟೇ ಮಾರಮ್ಮನ ದೇಗುಲದಲ್ಲಿ ಕಳ್ಳತನವಾಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net