

ಬೀದರ್: ಇಳಕಲ್‍ನ ವಿಜಯ ಮಹಾಂತೇಶ್ವರ ಸಂಸ್ಥಾನ ಮಠದ ಪ್ರಸಕ್ತ ಸಾಲಿನ ಬಸವ ರತ್ನ ಪ್ರಶಸ್ತಿ ಪುರಸ್ಕøತ ಅಕ್ಕ ಮಹಾದೇವಿ ಕಾಲೇಜಿನ ಉಪನ್ಯಾಸಕ ಶಿವಶರಣಪ್ಪ ಹುಗ್ಗಿ ಪಾಟೀಲ ಅವರನ್ನು ಕಲ್ಯಾಣ ಕರ್ನಾಟಕ ಪ್ರೌಢಶಾಲಾ ಶಿಕ್ಷಕರ ಸಂಘದ ವತಿಯಿಂದ ನಗರದಲ್ಲಿ ಸನ್ಮಾನಿಸಲಾಯಿತು.
ಹುಗ್ಗಿ ಪಾಟೀಲ ವೃತ್ತಿ ಜತೆಗೆ ಸಮಾಜೋಧಾರ್ಮಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಅವರಿಗೆ ಪ್ರಶಸ್ತಿ ಒಲಿದು ಬಂದಿರುವುದು ಸಂತಸ ಉಂಟು ಮಾಡಿದೆ ಎಂದು ಸಂಘದ ಜಿಲ್ಲಾ ಅಧ್ಯಕ್ಷ ಪಾಂಡುರಂಗ ಬೆಲ್ದಾರ್ ಹೇಳಿದರು.
ಶಿವಶರಣಪ್ಪ ಹುಗ್ಗಿ ಪಾಟೀಲ ಮಾತನಾಡಿ, ಪ್ರಶಸ್ತಿ ನನ್ನ ಜವಾಬ್ದಾರಿ ಹೆಚ್ಚಿಸಿದೆ. ಇನ್ನಷ್ಟು ಸಮಾಜ ಸೇವೆಗೆ ಪ್ರೇರಣೆ ನೀಡಿದೆ ಎಂದರು.
ಬುದ್ಧಿಸ್ಟ್ ಸೊಸೈಟಿ ಆಫ್ ಇಂಡಿಯಾದ ಕರ್ನಾಟಕ ಉಸ್ತುವಾರಿ ವೀರಶೆಟ್ಟಿ ದೀನೆ, ಬೀದರ್ ಜಿಲ್ಲಾ ಘಟಕದ ಅಧ್ಯಕ್ಷ ಮಾಣಿಕರಾವ್ ಧೂಳೆ, ಎಸ್.ಸಿ, ಎಸ್.ಟಿ. ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಗೋವಿಂದ ಪೂಜಾರಿ ಮಾತನಾಡಿದರು.
ಲಿಂಗಾಯತ ನೌಕರರ ಸಂಘದ ರಾಜ್ಯ ಅಧ್ಯಕ್ಷ ಶಿವರಾಜ ಕಪಲಾಪುರೆ, ಕಲ್ಯಾಣ ಕರ್ನಾಟಕ ಪ್ರೌಢಶಾಲಾ ಶಿಕ್ಷಕರ ಸಂಘದ ಉಪಾಧ್ಯಕ್ಷ ರವಿಕುಮಾರ ಕುಮನೂರ, ಸಹ ಕಾರ್ಯದರ್ಶಿ ಬಲವಂತರಾವ್ ರಾಠೋಡ್, ಸಂಘಟನಾ ಕಾರ್ಯದರ್ಶಿ ವೈಜಿನಾಥ ಸಾಳೆ, ಕೋಶಾಧ್ಯಕ್ಷ ಸಂಜೀವಕುಮಾರ ಸ್ವಾಮಿ, ಸಂತೋಷ ಬೌದ್ಧೆ, ಕಿರಣ ಜ್ಯಾಂತಿ, ಲಕ್ಷ್ಮಿ ಹೊಸಮನಿ, ಪುಣ್ಯವತಿ ಇದ್ದರು.