ಹುಬ್ಬಳ್ಳಿ-ಧಾರವಾಡ ಅಭಿವೃದ್ಧಿಗೆ ಸಹಕಾರ ನೀಡಿ

h22-CMD Sir 2
Published on

ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ಅಭಿವೃದ್ಧಿ ವೇದಿಕೆ ವತಿಯಿಂದ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರನ್ನು ನಗರದಲ್ಲಿ ಭಾನುವಾರ ಸನ್ಮಾನಿಸಲಾಯಿತು.

ವೇದಿಕೆ ಅಧ್ಯಕ್ಷ ಹಾಗೂ ವಿಆರ್​ಎಲ್ ಸಮೂಹ ಸಂಸ್ಥೆಗಳ ಚೇರ್ಮನ್, ಪದ್ಮಶ್ರೀ ಡಾ. ವಿಜಯ ಸಂಕೇಶ್ವರ ಅವರು ಮಾತನಾಡಿ, ‘ಹುಬ್ಬಳ್ಳಿ- ಧಾರವಾಡ ಅಭಿವೃದ್ಧಿಗೆ ಮೊದಲಿನಿಂದಲೂ ತಮ್ಮ ಸಹಕಾರವಿದೆ. ಅವಳಿ ನಗರದ ಸಮಗ್ರ ಅಭಿವೃದ್ಧಿಗೆ ಇನ್ನಷ್ಟು ಸಹಕಾರ ನೀಡಿ’ ಎಂದು ಉಪ ರಾಷ್ಟ್ರಪತಿ ಅವರನ್ನು ಕೋರಿದರು. ಇದಕ್ಕೆ ಪ್ರತಿಕ್ರಿಯಿಸಿದ ವೆಂಕಯ್ಯ ನಾಯ್ಡು ಅವರು, ‘ನಾನು ಕೇಂದ್ರ ಸಚಿವನಾಗಿದ್ದಾಗ ಹುಬ್ಬಳ್ಳಿ- ಧಾರವಾಡ ಅಭಿವೃದ್ಧಿಗೆ ಬಹಳಷ್ಟು ಅನುದಾನ ನೀಡಿದ್ದೇನೆ’ ಎಂದರು.

ಬಿಆರ್​ಟಿಎಸ್ ಉದ್ಘಾಟನೆ ಮಾಡಿದ್ದನ್ನು ಇದೇ ವೇಳೆ ಸ್ಮರಿಸಿದರು. ವೇದಿಕೆ ಖಜಾಂಚಿ ಡಾ. ವಿ.ಎಸ್.ವಿ. ಪ್ರಸಾದ ಅವರು, ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರಿಗೆ ಪುಸ್ತಕ ಕೊಟ್ಟು ಗೌರವಿಸಿದರು. ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ವೇದಿಕೆ ಉಪಾಧ್ಯಕ್ಷರಾದ ನಂದಕುಮಾರ, ಮಹಾದೇವ ಕರಮರಿ, ಕಾರ್ಯದರ್ಶಿ ಜಗದೀಶ ಹಿರೇಮಠ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net